ADVERTISEMENT

ಜಾತಿವಾರು ಸಮೀಕ್ಷಾ ಕಾರ್ಯದಲ್ಲಿ ಬೇಜವಾಬ್ದಾರಿತನ: ಅಧಿಕಾರಿ ಅಮಾನತು

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2025, 0:17 IST
Last Updated 28 ಸೆಪ್ಟೆಂಬರ್ 2025, 0:17 IST
ರಮೇಶ ರಾಠೋಡ
ರಮೇಶ ರಾಠೋಡ   

ಲಿಂಗಸುಗೂರು (ರಾಯಚೂರು ಜಿಲ್ಲೆ): ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ರಾಠೋಡ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. 

ರಮೇಶ ಜಿ.ರಾಠೋಡ ಸಮೀಕ್ಷಾ ಕಾರ್ಯಕ್ಕೆ ಸಹಕರಿಸುತ್ತಿಲ್ಲ. ಪ್ರಗತಿ ಕುಂಠಿತವಾಗಿದೆ ಎಂದು ತಹಶೀಲ್ದಾರ್ ಸತ್ಯಮ್ಮ ಅವರು ಜಿಲ್ಲಾಧಿಕಾರಿಗೆ ಲಿಖಿತ ದೂರು ನೀಡಿದ್ದರು.

ರಮೇಶ ರಾಠೋಡ ಲೋಕಸಭಾ ಚುನಾವಣೆ ವೇಳೆಯೂ ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ, ಬೇಜವಾಬ್ದಾರಿತನ ತೋರಿದ ಕಾರಣಕ್ಕೆ ಅಮಾನತುಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.