ದೇವದುರ್ಗ: ಸರ್ಕಾರಿ ವಾಹನ ದುರ್ಬಳಕೆ ಮಾಡಿಕೊಂಡಿದ್ದ ತಾಲ್ಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಹೀರಲಾಲ ಅವರಿಗೆ ರಾಯಚೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇಇ ನಾಗೇಶ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.
ಜುಲೈ 3 ರಂದು ಪ್ರಜಾವಾಣಿಯಲ್ಲಿ ವಾಹನ ದುರ್ಬಳಕೆ ಆರೋಪ ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಪ್ರಕಟಿಸಲಾಗಿತ್ತು.
ಎಇಇ ಸರ್ಕಾರಿ ವಾಹನವನ್ನು ದುರ್ಬಳಕೆ ಮಾಡಿಕೊಂಡು ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಬೆನಕನಹಳ್ಳಿ ಕ್ರಮಕ್ಕೆ ಕುಟುಂಬ ಸದಸ್ಯರೊಡನೆ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.