ADVERTISEMENT

ವಸತಿ ಶಾಲೆಗಳಿಗೆ ಸ್ವಂತ ಕಟ್ಟಡಕ್ಕಾಗಿ ₹500 ಕೋಟಿ ಅನುದಾನ: ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2019, 19:52 IST
Last Updated 10 ನವೆಂಬರ್ 2019, 19:52 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ರಾಯಚೂರು: ‘ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ₹ 500 ಕೋಟಿ ಅನುದಾನ ಮೀಸಲಿಡಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಲಿಂಗಸುಗೂರು ತಾಲ್ಲೂಕಿನ ಈಚನಾಳದಲ್ಲಿ ಭಾನುವಾರ ಎರಡು ನೂತನ ವಸತಿ ನಿಲಯಗಳನ್ನು ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈಗಾಗಲೇ ಇರುವ ವಸತಿ ನಿಲಯಗಳಿಗೆ ಸೌಕರ್ಯ ಅಭಿವೃದ್ಧಿಗೆ ಮತ್ತು ಅಗತ್ಯ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ₹140 ಕೋಟಿ ಮೀಸಲಿಡಲಾಗಿದೆ’ ಎಂದರು.

‘ಪರಿಶಿಷ್ಟರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲು ಹಾಗೂ ಅವರಿಗೆ ಕೌಶಲ ತರಬೇತಿ ನೀಡಲು ಆದ್ಯತೆ ನೀಡಲಾಗಿದೆ. ಭೂ ಒಡೆತನ ಅರ್ಜಿಗಳನ್ನು ತ್ವರಿತ ವಿಲೇವಾರಿ ಮಾಡಲಾಗುತ್ತಿದೆ. ಪರಿಶಿಷ್ಟರಿಗಾಗಿ 300 ಎಕರೆ ಜಮೀನು ಖರೀದಿಸಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.