ಸಿಂಧನೂರು: ತಾಲ್ಲೂಕಿನ ಸೋಮಲಾಪುರ ಗ್ರಾಮ ಪಂಚಾಯಿತಿ ಸದಸ್ಯೆ ರೇಣುಕಮ್ಮ ಹುಸೇನ್ ಮಲ್ಕಾಪುರ ಅವರು ಶಾಸಕ ಹಂಪನಗೌಡ ಬಾದರ್ಲಿ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಪಂಪನಗೌಡ ಬಾದರ್ಲಿ ಸಮ್ಮುಖದಲ್ಲಿ ಬುಧವಾರ ಶಾಸಕರ ನಿವಾಸದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು.
ಕಾಂಗ್ರೆಸ್ ಮುಖಂಡರಾದ ರಾಜುಗೌಡ ಬಾದರ್ಲಿ, ಬಸವರಾಜ ಹಿರೇಗೌಡರ್, ಅಶೋಕ ಉಮಲೂಟಿ, ಲಿಂಗರಾಜ ದಢೇಸುಗೂರು, ರಾಮನಗೌಡ ಮಲ್ಲಾಪುರ, ಮೇಘನಾ ಸೋಮಲಾಪುರ, ಕರಿಯಪ್ಪ ಸೇರಿದಂತೆ ಸೋಮಲಾಪುರ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.