
ಪ್ರಜಾವಾಣಿ ವಾರ್ತೆ
ಮಾನ್ವಿ: ಪಟ್ಟಣದ ಜನತಾ ಹೌಸ್ ಕಾಲೊನಿಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಒಂದೇ ಸಮುದಾಯದ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಹಲವರು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಮದುವೆ ಸಮಾರಂಭದಲ್ಲಿ ಧ್ವನಿವರ್ಧಕದಲ್ಲಿನ ಹಾಡಿಗೆ ಮಕ್ಕಳು ನೃತ್ಯ ಮಾಡಿದ್ದಕ್ಕಾಗಿ ಒಂದು ಗುಂಪು ಅಕ್ಷೇಪ ವ್ಯಕ್ತಪಡಿಸಿದ ಕಾರಣ ಆರಂಭವಾದ ಜಗಳ ಎರಡು ಗುಂಪುಗಳ ನಡುವಿನ ಘರ್ಷಣೆಯಾಗಿ ಮಾರ್ಪಟ್ಟಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಎರಡು ಗುಂಪುಗಳ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜಗಳವನ್ನು ಬಿಡಿಸಲು ಹೋದವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಘಟನೆ ಕುರಿತು ಮಾಹಿತಿ ಪಡೆದರು. ಎರಡು ಗುಂಪುಗಳ ಕಡೆಯವರು ಪೊಲೀಸ್ ಠಾಣೆಯಲ್ಲಿ ದೂರು–ಪ್ರತಿದೂರು ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.