ರಾಯಚೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಆಂಧ್ರಪ್ರದೇಶ ಸರ್ಕಾರ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಸಹಯೋಗದೊಂದಿಗೆ ಬುಧವಾರ ಮಠದ ಆವರಣದಲ್ಲಿ ‘ಯೋಗಂದ್ರ’ ವಿಶೇಷ ಯೋಗ ಕಾರ್ಯಕ್ರಮ ನಡೆಸಿತು.
ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ ಅನುಗ್ರಹ ಸಂದೇಶ ನೀಡಿದರು.
ಮಠದ ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿಗಳು, ಮಠದ ಸಿಬ್ಬಂದಿ, ಭಕ್ತರು ಯೋಗಾಸನ ಮಾಡುವ ಮೂಲಕ ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಎಲ್.ಮಾಧವ ಶೆಟ್ಟಿ (ಎಎಒ), ವ್ಯವಸ್ಥಾಪಕ ಎಸ್.ಕೆ.ಶ್ರೀನಿವಾಸ ರಾವ್ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.
ಜಿಲ್ಲಾಮಟ್ಟದ ಯೋಗ ಸ್ಪರ್ಧೆ: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ರಾಯಚೂರಿನ ಜಿಲ್ಲಾ ಆಯುಷ್ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ ನಡೆಯಿತು.
ಆಯುಷ್ ಆಸ್ಪತ್ರೆಯ ಡಾ.ಶಂಕರ ಗೌಡ ಅವರು ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.
ಡಾ ಪೂಜಾ, ಡಾ.ನವೀನ್, ಡಾ.ಅರ್ಪಿತಾ, ಶಿಕ್ಷಕ ದಂಡಪ್ಪ ಬಿರಾದಾರ ಉಪಸ್ಥಿತರಿದ್ದರು.
ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಯೋಗ ಪಟುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು ಯೋಗ ಪ್ರದರ್ಶನ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.