ADVERTISEMENT

ಎಲ್ಲರೂ ಪರಿಸರ ಕಾಳಜಿ ತೋರಿಸಿ

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯದೀಶ ಬೈಲೂರು ಶಂಕರರಾಮ್ ಸಲಹೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2019, 15:31 IST
Last Updated 5 ಜೂನ್ 2019, 15:31 IST
ರಾಯಚೂರಿನ ಜಿಲ್ಲಾ ಕಾರ್ಯಾಗೃಹದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಸಸಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯದೀಶ ಬೈಲೂರು ಶಂಕರರಾಮ್ ಸಸಿ ನೆಡುವುದರ ಮೂಲಕ ಉದ್ಘಾಟಿಸಿದರು
ರಾಯಚೂರಿನ ಜಿಲ್ಲಾ ಕಾರ್ಯಾಗೃಹದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಸಸಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯದೀಶ ಬೈಲೂರು ಶಂಕರರಾಮ್ ಸಸಿ ನೆಡುವುದರ ಮೂಲಕ ಉದ್ಘಾಟಿಸಿದರು   

ರಾಯಚೂರು: ಇತ್ತಿಚಿನ ದಿನಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಲಿದೆ. ಇದರಿಂದ ಸಾರ್ವಜನಿಕ ಜೀವನಕ್ಕೆ ಬಹಳ ತೊಂದರೆಯಾಗುತ್ತಲಿದೆ. ಪ್ರತಿಯೊಬ್ಬ ವ್ಯಕ್ತಿಯೂ ಪರಿಸರ ಕಾಳಜಿ ತೊರಿಸಬೇಕಾಗಿದೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯದೀಶರಾದ ಬೈಲೂರು ಶಂಕರರಾಮ್ ಹೇಳಿದರು.

ಜಿಲ್ಲಾ ಕಾರಾಗೃಹದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಮತ್ತು ಪ್ರಾದೇಶಿಕ ಅರಣ್ಯ ಇಲಾಖೆ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಸಸಿಯನ್ನು ನೆಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ಒಂದು ಗಿಡ ನಾಶವಾದರೆ, ಅದಕ್ಕೆ ಪರ್ಯಾಯವಾಗಿ ಹತ್ತು ಗಿಡಗಳನ್ನು ಹಾಕಬೇಕು. ಹೆಚ್ಚು ಗೀಡಗಳನ್ನು ಬೆಳೆಯುವುದುರಿಂದ ಉತ್ತಮ ಪರಿಸರ ಸಿಗುತ್ತದೆ. ಸಕಾಲಕ್ಕೆ ಮಳೆ ಬರುವುದಕ್ಕೆ ಸಾಧ್ಯವಾಗುತ್ತದೆ ಎಂದರು.

ADVERTISEMENT

ಯುವ ಜನಾಂಗ ಮತ್ತು ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಗಿಡಗಳನ್ನು ತಮ್ಮ ಮನೆಯ ಸುತ್ತ ಶಾಲೆ ಕಾಲೇಜುಗಳಲ್ಲಿ ಮತ್ತು ಸಂಘ ಸಂಸ್ಥೆಗಳಲ್ಲಿ ಬೆಳೆಸುವುದರ ಮೂಲಕ ಪರಿಸರ ಉಳಿಸಿ ಬೆಳೆಸಬೇಕು. ಪರಿಸರ ಕಾಪಾಡುವುದು ಎಲ್ಲರ ಅದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಅರಣ್ಯ ಇಲಾಖೆ ಅಧಿಕಾರಿ ನಾರಾಯಣಸ್ವಾಮಿ ಮಾತನಾಡಿ, ಗಿಡಗಳನ್ನು ಹೆಚ್ಚು ಬೆಳೆಸುವುದರಿಂದ ಆಗುತ್ತಿರುವ ಲಾಭಗಳು ಮತ್ತು ಅರಣ್ಯ ನಾಶವಾಗುತ್ತಿರುವುದರಿಂದ ಪರಿಸರದ ಮೇಲಾಗುವ ಪರಿಣಾಮಗಳ ಕುರಿತು ಮಾಹಿತಿ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಸಿ.ಎಸ್ ನಾಡಗೌಡ ಮಾತನಾಡಿ, ಕಾರಾಗೃಹದಲ್ಲಿ ಹಾಕಿದ ಸಸಿಗಳ ಸಂರಕ್ಷಣೆಯನ್ನು ಸಂಬಂಧ ಪಟ್ಟ ಅಧಿಕಾರಿಗಳು ಅಚ್ಚುಕಟ್ಟಾಗಿ ಮಾಡಬೇಕೆಂದು ಹೇಳಿದರು.

ಜಿಲ್ಲಾ ನ್ಯಾಯಲಯದ ವಿವಿಧ ನ್ಯಾಯಧೀಶರು ಇದ್ದರು. ಜಿಲ್ಲಾ ಅರಣ್ಯ ಅಧಿಕಾರಿಗಳಾದ ಶಿವಯ್ಯ, ಅರಣ್ಯ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ ಬೊರಲೆ , ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಂಡಪ್ಪ ಬಿರಾದಾರ, ಜಿಲ್ಲಾ ಕಾರಾಗೃಹದ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.