ADVERTISEMENT

ರಾಯಚೂರು | ಗ್ಯಾರಂಟಿ: ಜಿಲ್ಲೆಯ ಕಿರುಹೊತ್ತಿಗೆ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2025, 14:24 IST
Last Updated 16 ಏಪ್ರಿಲ್ 2025, 14:24 IST
ರಾಯಚೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ‘ಎಡೆದೊರೆ ನಾಡಲ್ಲಿ ಪಂಚ ಗ್ಯಾರಂಟಿ ಯಶೋಗಾಥೆ ನುಡಿದಂತೆ ನಡೆದಿದ್ದೇವೆ’ ಎನ್ನುವ ರಾಯಚೂರು ಜಿಲ್ಲೆಯ ಕಿರುಹೊತ್ತಿಗೆ ಬಿಡುಗಡೆ ಮಾಡಿದರು
ರಾಯಚೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ‘ಎಡೆದೊರೆ ನಾಡಲ್ಲಿ ಪಂಚ ಗ್ಯಾರಂಟಿ ಯಶೋಗಾಥೆ ನುಡಿದಂತೆ ನಡೆದಿದ್ದೇವೆ’ ಎನ್ನುವ ರಾಯಚೂರು ಜಿಲ್ಲೆಯ ಕಿರುಹೊತ್ತಿಗೆ ಬಿಡುಗಡೆ ಮಾಡಿದರು   

ರಾಯಚೂರು: ‘ಎಡೆದೊರೆ ನಾಡಲ್ಲಿ ಪಂಚ ಗ್ಯಾರಂಟಿ ಯಶೋಗಾಥೆ ನುಡಿದಂತೆ ನಡೆದಿದ್ದೇವೆ’ ಎನ್ನುವ ರಾಯಚೂರು ಜಿಲ್ಲೆಯ ಕಿರುಹೊತ್ತಿಗೆಯನ್ನು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ನಗರದ ನೂತನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಈಚೆಗೆ ನಡೆದ ಸಭೆಯಲ್ಲಿ ಬಿಡುಗಡೆ ಮಾಡಿದರು.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಸಂಸದ ಜಿ.ಕುಮಾರ ನಾಯಕ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ, ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಂಪನಗೌಡ ಬಾದರ್ಲಿ, ನಗರ ಶಾಸಕ ಡಾ. ಎಸ್.ಶಿವರಾಜ ಪಾಟೀಲ, ಮಾನ್ವಿ ಜಿ.ಹಂಪಯ್ಯ ನಾಯಕ, ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ, ಬಸನಗೌಡ ಬಾದರ್ಲಿ ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಉಪ ವಿಭಾಗಾಧಿಕಾರಿ ಗಜಾನನ ಬಾಳೆ, ಬಸವಣೆಪ್ಪ ಕಲಶೆಟ್ಟಿ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.