ADVERTISEMENT

ಅತಿಥಿ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 11:32 IST
Last Updated 10 ಜುಲೈ 2020, 11:32 IST
ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಭಿತ್ತಿಪತ್ರ ಪ್ರದರ್ಶಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು
ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಭಿತ್ತಿಪತ್ರ ಪ್ರದರ್ಶಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು   

ರಾಯಚೂರು: ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರಿಗೆ ಬಾಕಿ ವೇತನ ಪಾವತಿ ಹಾಗೂ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಈಗಾಗಲೇ 8 ಜನ ಅತಿಥಿ ಉಪನ್ಯಾಸಕರು ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಪನ್ಯಾಸಕಿಯೊಬ್ಬರು ಕ್ಯಾನ್ಸರ್‌ ಕಾಯಿಲೆಯಿಂದ ಗುರುವಾರ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹೀಗೆ ಹಲವಾರು ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರು ಹೇಳಿಕೊಳ್ಳಲಾಗದ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಾನಸಿಕವಾಗಿ ನೊಂದಿದ್ದಾರೆ ಹಾಗೂ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ ಎಂದು ತಿಳಿಸಿದರು.

ಎಲ್ಲಾ ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಮಿತಿಯ ಪದಾಧಿಕಾರಿ ಚನ್ನಬಸವ ಜಾನೇಕಲ್, ವೀರೇಶ, ಈರಣ್ಣ, ಡಾ.ಹನುಮಂತ, ರಂಗಮುನಿದಾಸ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.