ADVERTISEMENT

ಗುರು ಪೂರ್ಣಿಮೆ: ಮಂತ್ರಾಲಯಕ್ಕೆ ಹರಿದು ಬಂದ ಭಕ್ತರು

​ಪ್ರಜಾವಾಣಿ ವಾರ್ತೆ
Published 10 ಜುಲೈ 2025, 5:43 IST
Last Updated 10 ಜುಲೈ 2025, 5:43 IST
<div class="paragraphs"><p>ಗುರು ಪೂರ್ಣಿಮೆ ಪ್ರಯುಕ್ತ ಮಂತ್ರಾಲಯದಲ್ಲಿ ಭಕ್ತರು ರಾಯರ ದರ್ಶನ ಪಡೆಯಲು ಮಠದ ಹೊರಾಂಗಣದಲ್ಲಿ ಅಪಾರ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದರು</p></div>

ಗುರು ಪೂರ್ಣಿಮೆ ಪ್ರಯುಕ್ತ ಮಂತ್ರಾಲಯದಲ್ಲಿ ಭಕ್ತರು ರಾಯರ ದರ್ಶನ ಪಡೆಯಲು ಮಠದ ಹೊರಾಂಗಣದಲ್ಲಿ ಅಪಾರ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದರು

   

ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರ ಗುರು ಪೂರ್ಣಿಮೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಮಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಬೆಳಿಗ್ಗೆಯಿಂದಲೇ ಮಠದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.

ADVERTISEMENT

ಶ್ರೀ ರಾಘವೇಂದ್ರ ಸ್ವಾಮಿಗಳಿಗೆ ಪೂಜೆ ಸಲ್ಲಿಸಲು ಹಾಗೂ ದರ್ಶನ ಪಡೆಯಲು ಗುರುವಾರ ಭಾರಿ ಸಂಖ್ಯೆಯಲ್ಲಿ ಭಕ್ತ ಸಾಗರ ಹರಿದು ಬಂದಿದೆ. ರಾಯರ ದಿನವೆಂದೇ ನಂಬಲಾದ ಗುರುವಾರವೇ ಗುರು ಪೂರ್ಣಿಮೆ ಬಂದ ಕಾರಣ ಬುಧವಾರ ರಾತ್ರಿಯೇ ಭಾರಿ ಸಂಖ್ಯೆಯಲ್ಲಿ ಮಂತ್ರಾಲಯಕ್ಕೆ ಬಂದಿದ್ದಾರೆ. ತುಂಗಭದ್ರೆಯ ನದಿ ತಟದಲ್ಲಿ ಸ್ನಾನ ಮಾಡಿ ಪೂಜೆ ಸಲ್ಲಿಸುವ ಮೂಲಕ ಗುರುವಾರ ರಾಯರ ದರ್ಶನ ಪಡೆದರು.

ಭಕ್ತರನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಪ್ರಯಾಸ ಪಡಬೇಕಾಯಿತು. ಬಂದಾವನದಿಂದ ಮಠದ ಹೊರಾಂಗಣದ ವರೆಗೂ ಅಪಾರ ಸಂಖ್ಯೆಯಲ್ಲಿ ಭಕ್ತರು ಕುಟುಂಬದ ಸದಸ್ಯರೊಂದಿಗೆ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದು ಭಕ್ತಿ ಸೇವೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.