ರಾಯಚೂರು: ಶ್ರೀರಾಘವೇಂದ್ರ ಸ್ವಾಮಿಗಳ 404ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ 430ನೇ ವರ್ಧಂತಿ ಉತ್ಸವದ ಅಂಗವಾಗಿ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶನಿವಾರ ಗುರುವೈಭವೋತ್ಸವವು ಸಂಭ್ರಮದಿಂದ ಪ್ರಾರಂಭವಾಯಿತು.
ಮಹೋತ್ಸವದ ಅಂಗವಾಗಿ ರಾಘವೇಂದ್ರ ಸ್ವಾಮಿಗಳ ಮೂಲ ಪಾದುಕೆಗಳ ಪಟ್ಟಾಭಿಷೇಕ ಮಹೋತ್ಸವ, ನಂತರ ರಾಯರ ರಥೋತ್ಸವ ಜರುಗಿತು. ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ರಥೋತ್ಸವಕ್ಕೆ ಚಾಲನೆ ನೀಡಿದರು.
ಇದಕ್ಕೂ ಮೊದಲು ಆಂಧ್ರಪ್ರದೇಶದ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಸಚಿವ ನಾರಾ ಲೋಕೇಶ್ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು. ರಾಯರು ಮತ್ತು ವದೀಂದ್ರ ತೀರ್ಥರ ದರ್ಶನ ಪಡೆಯಲು ಮಠದ ಅಧಿಕಾರಿಗಳು ಮಾರ್ಗದರ್ಶನ ನೀಡಿದರು. ನಾರಾ ಲೋಕೇಶ್ ಅವರು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಮಂತ್ರಾಲಯದಲ್ಲಿ ಮಧ್ವಮಾರ್ಗದ ವಿಸ್ತೃತ ಕಾರಿಡಾರ್ ಅನ್ನು ಸುಬುಧೇಂದ್ರ ತೀರ್ಥರು ಹಾಗೂ ನಾರಾ ಲೋಕೇಶ್ ಜಂಟಿಯಾಗಿ ಉದ್ಘಾಟಿಸಿದರು. ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
ಗುರುವೈಭವೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ, ಆಧ್ಮಾತ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.