ಪ್ರಜಾವಾಣಿ ವಾರ್ತೆ
ರಾಯಚೂರು: ಜಿಲ್ಲೆಯಾದ್ಯಂತ ಹನುಮ ಜಯಂತಿಯನ್ನು ಶನಿವಾರ ಭಕ್ತಿಭಾವದಿಂದ ಆಚರಿಸಲಾಯಿತು.
ಎಲ್ಲ ಹನುಮ ದೇವಸ್ಥಾನಗಳಲ್ಲಿ ಬೆಳಿಗ್ಗೆಯಿಂದಲೇ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಕೆಲವು ಕಡೆ ವೇದಿಕೆ ಕಾರ್ಯಕ್ರಮ, ಅನ್ನಪ್ರಸಾದ, ಕೇಸರಿ ಬಾವುಟಗಳ ಸಹಿತ ಹನುಮನ ಭಾವಚಿತ್ರ ಮೆರವಣಿಗೆ, ರಥೋತ್ಸವ ಹಾಗೂ ತೊಟ್ಟಿಲೋತ್ಸವ ಮಾಡಲಾಯಿತು.
ಗಾಂಧಿ ವೃತ್ತದ ಹನುಮಾನ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿದವು. ಸುತ್ತಮುತ್ತಲಿನ ಬಡಾವಣೆಗಳಿಂದ ಭಕ್ತರು ಭಾಗವಹಿಸಿದ್ದರು.
ನಗರದ ವಿವಿಧ ಬಡಾವಣೆಗಳಲ್ಲಿರುವ ಹನುಮಾನ ದೇವಸ್ಥಾನಗಳಲ್ಲಿ ದಿನಪೂರ್ತಿ ಭಕ್ತರು ದರ್ಶನಕ್ಕಾಗಿ ಬರುತ್ತಿರುವುದು ಸಾಮಾನ್ಯವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.