ADVERTISEMENT

ಹನುಮನದೊಡ್ಡಿ: ಸರ್ವಜ್ಞ ಜಯಂತಿ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2022, 11:00 IST
Last Updated 10 ಮಾರ್ಚ್ 2022, 11:00 IST
ಶಕ್ತಿನಗರ ಬಳಿಯ ಹನುಮನದೊಡ್ಡಿ ಗ್ರಾಮದಲ್ಲಿ ಗುರುವಾರ ತ್ರಿಪದಿ ಕವಿ ಸರ್ವಜ್ಞ ಜಯಂತಿ ಆಚರಿಸಲಾಯಿತು
ಶಕ್ತಿನಗರ ಬಳಿಯ ಹನುಮನದೊಡ್ಡಿ ಗ್ರಾಮದಲ್ಲಿ ಗುರುವಾರ ತ್ರಿಪದಿ ಕವಿ ಸರ್ವಜ್ಞ ಜಯಂತಿ ಆಚರಿಸಲಾಯಿತು   

ಹನುಮನದೊಡ್ಡಿ (ಶಕ್ತಿನಗರ): ’ತ್ರಿಪದಿ ಕವಿ ಸರ್ವಜ್ಞ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು‘ ಎಂದು ಜಿಲ್ಲಾ ಕುಂಬಾರರ ಸಂಘದ ಅಧ್ಯಕ್ಷ ಶಿವರಾಜ ಕುಂಬಾರ ವಡ್ಲೂರು ಹೇಳಿದರು.

ಹನುಮನದೊಡ್ಡಿ ಗ್ರಾಮದಲ್ಲಿ ಗುರುವಾರ ಏರ್ಪಡಿಸಿದ್ದ ತ್ರಿಪದಿ ಕವಿ ಸರ್ವಜ್ಞ ಜಯಂತೋತ್ಸವದ ನಿಮಿತ್ಯವಾಗಿ ಸರ್ವಜ್ಞ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ನಂತರ ಮಾತನಾಡಿ, ‘ಸರ್ವಜ್ಞರು ಗುರುವಿನ ಶ್ರೇಷ್ಠತೆಯನ್ನು ಜಗತ್ತಿಗೆ ತಿಳಿಸುವಲ್ಲಿ ಮಹತ್ತರ ಕಾರ್ಯವನ್ನು ಮಾಡಿದ್ದಾರೆ. ಅವರ ತ್ರಿಪದಿ ಪದ್ಯಗಳು ಸಮಾಜದಲ್ಲಿನ ಜಾತಿ, ಭೇದ ಭಾವನೆಯನ್ನು ತೊಡೆದು ಹಾಕುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿವೆ’ ಎಂದರು.

ವೇದಿಕೆಯಲ್ಲಿ ಹೈದರಾಬಾದ್ ಕರ್ನಾಟಕದ ಕುರುಬರ ಸಮಾಜದ ಅಧ್ಯಕ್ಷ ಸುರೇಂದ್ರಬಾಬು, ಡಿ.ಯದ್ಲಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಪ್ಪ ಡೋಣಿ, ಜಿಲ್ಲಾ ಕುಂಬಾರರ ಸಂಘದ ಅಧ್ಯಕ್ಷ ಶಿವರಾಜ ಕುಂಬಾರ ವಡ್ಲೂರು, ಗ್ರಾಮ ಪಂಚಾಯಿತಿ ಸದಸ್ಯರಾದ ಶರಣಮ್ಮ ಶಿವರಾಜ್, ಮಲ್ಲಪ್ಪ ದಳಪತಿ, ಜಿ.ಬಸವರಾಜ್ ಮಾಡಗಿರಿ, ಭೀಮಣ್ಣ, ನರಸಿಂಗಪ್ಪ ಪೊಲೀಸ, ವಿರೇಶ, ಗುರುಸ್ವಾಮಿ, ರಾಕೇಶ್, ಶಾಲೆಯ ಮುಖ್ಯ ಶಿಕ್ಷಕ ಜಂಭಯ್ಯ ಹಾಗೂ ಪ್ರಮುಖರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.