ADVERTISEMENT

ಹಟ್ಟಿ ಚಿನ್ನದ ಗಣಿ: ಅಧಿಕಾರಿಗಳಿಂದ ಸರ್ಕಾರಿ ಕಾಲೇಜು ಪರಿಶೀಲಿನೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2025, 8:12 IST
Last Updated 15 ಅಕ್ಟೋಬರ್ 2025, 8:12 IST
ಹಟ್ಟಿ‌ ಪಟ್ಟಣದ ಕ್ಯಾಂಪ್ ಪ್ರದೇಶದಲ್ಲಿ ಇರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಹಟ್ಟಿ‌ ಪಟ್ಟಣದ ಕ್ಯಾಂಪ್ ಪ್ರದೇಶದಲ್ಲಿ ಇರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ ನೀಡಿ ಪರಿಶೀಲನೆ ಮಾಡಿದರು.   

ಹಟ್ಟಿ ಚಿನ್ನದ ಗಣಿ: ಪಟ್ಟಣದ ಸರ್ಕಾರಿ ಪಿಯಸಿ ಕಾಲೇಜಿನ ಅವ್ಯವಸ್ಥೆ ಕಂಡು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶಕುಮಾರ ಸಿಂಗ್ ಅವರು, ಕಾಲೇಜಿನ ಪ್ರಾಚಾರ್ಯರರನ್ನು ತರಾಟೆಗೆ ತೆಗೆದುಕೊಂಡರು.

ಪಟ್ಟಣದ ಅಧಿಸೂಚಿತ ಪ್ರದೇಶದಲ್ಲಿರುವ ಸರ್ಕಾರಿ ಪಿಯು ಕಾಲೇಜು ಹಾಗೂ ಡಾ.ಅಂಬೇಡ್ಕರ್ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸರ್ಕಾರಿ ಪಿಯುಸಿ ಕಾಲೇಜಿಗೆ ಭೇಟಿ ನೀಡಿ ಮಾತನಾಡಿದ ಅವರು, ‘ಕಾಲೇಜಿನ ಕೊಠಡಿಗಳು ಶಿಥಿಲಗೊಂಡು ಸೋರುತ್ತಿವೆ. ಕಾಲೇಜಿನ ಸುತ್ತಲು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹಳೆ ಕೊಠಡಿಗಳನ್ನು ತೆರವುಗೊಳಿಸಬೇಕು. ಹೊಸ ಕೊಠಡಿಗಳಲ್ಲಿ ತರಗತಿಗಳನ್ನು ನಡೆಸಬೇಕು. ಶಿಥಿಲಗೊಂಡ ಕೊಠಡಿಗಳಲ್ಲಿ ವಿದ್ಯಾರ್ಥಿಗಳನ್ನು ಕುಳ್ಳರಿಸಬಾರದು. ವಿದ್ಯಾರ್ಥಿ ಹಾಗೂ ಪಾಲಕರಿಂದ ದೂರು ಬಂದರೆ, ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ADVERTISEMENT

‘ಕಾಲೇಜಿನಲ್ಲಿ ನಡೆಯುತ್ತಿದ್ದ ಶೌಚಾಲಯ ಕೊಠಡಿ ದುರಸ್ತಿ, ಕಾಮಗಾರಿ ಪರಿಶೀಲನೆ ಮಾಡಿ, ಕಾಮಗಾರಿ ಕಳಪೆಯಾಗಿದೆ. ಗುತ್ತಿಗೆ ಪಡೆದ ಗುತ್ತಿಗೆದಾರನಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಜಿಲ್ಲಾಧಿಕಾರಿ ನಿತೀಶ ಕೆ., ಜಿ.ಪಂ, ಸಿಇಒ, ಈಶ್ವರಕುಮಾರ ಕಾಂದು, ಸಹಾಯಕ ಆಯುಕ್ತ ಬಸವಣೆಪ್ಪ ಕಲ್ಲಶೆಟ್ಟಿ, ತಹಶೀಲ್ದಾರ್‌ ಸತ್ಯಮ್ಮ, ತಾ.ಪಂ ಇಒ ಉಮೇಶ ಹಾಗೂ ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.