ADVERTISEMENT

ವಿಧಾನಸೌಧದಲ್ಲಿ ದರೋಡೆಕೋರರಿದ್ದಾರೆ: ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2022, 10:30 IST
Last Updated 19 ಆಗಸ್ಟ್ 2022, 10:30 IST
ಎಚ್.ಡಿ.ಕುಮಾರಸ್ವಾಮಿ
ಎಚ್.ಡಿ.ಕುಮಾರಸ್ವಾಮಿ   

ರಾಯಚೂರು: 'ದರೋಡೆಕೋರರನ್ನು ನೋಡಲು ಚಂಬಲ್ ಕಣಿವೆಗೆ ಹೋಗಬೇಕಿಲ್ಲ. ಬೆಂಗಳೂರಿಗೆ ಬಂದರೆ, ಚಂಬಲ್ ಕಣಿವೆಯಲ್ಲಿ ನೋಡುವ ದರೋಡೆಕೋರರು ವಿಧಾನಸೌಧದಲ್ಲೇ ಇದ್ದಾರೆ' ಎಂದು ಜೆಡಿಎಸ್ ಸಂಸದೀಯ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

'ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಪೂರ್ಣ ಪ್ರಮಾಣದಲ್ಲಿ ಐದು‌ ವರ್ಷಗಳ ಅಧಿಕಾರ ಕೊಡಿ. ಬಡವರ ಪರ, ರೈತರಪರ ಹೇಳಿರುವ ಮಾತುಗಳನ್ನು ಈಡೇರಿಸಲು ಸಾಧ್ಯವಾಗದಿದ್ದರೆ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ' ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.