ಮಸ್ಕಿ (ರಾಯಚೂರು ಜಿಲ್ಲೆ): ತಾಲ್ಲೂಕಿನ ಮೆದಿಕಿನಾಳ ಸರ್ಕಾರಿ ಆರೋಗ್ಯ ಇಲಾಖೆಯಲ್ಲಿ ಹಿರಿಯ ಪ್ರಯೋಗ ತಂತ್ರಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ (33) ಅವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪಟ್ಟಣದ ಠಾಕೂರ್ ಬಡಾವಣೆಯ ಚರಂಡಿ ಬಳಿ ಸೋಮವಾರ ಅವರ ಶವ ಪತ್ತೆಯಾಗಿದೆ.
ಆರೋಗ್ಯ ಇಲಾಖೆಯ ದ್ವಿಚಕ್ರವಾಹನ ಎರಡು ದಿನಗಳ ಕಾಲ ಒಂದೇ ಕಡೆ ನಿಂತಿದ್ದನ್ನು ನೋಡಿದ ಸ್ಥಳೀಯರು, ಪೊಲೀಸ್ ಠಾಣೆ ಹಾಗೂ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಲಿಂಗಸುಗೂರು ಡಿವೈಎಸ್‌ಪಿ ದತ್ತಾತ್ರೇಯ ಕರ್ನಾಡ್, ಸಿಪಿಐ ಬಾಲಚಂದ್ರ ಡಿ. ಲಕ್ಕಂ, ಪಿಎಸ್ಐ ಮುದ್ದುರಂಗಯ್ಯ ಅವರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ.
‘ಮಂಜುನಾಥನನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದ ತನಿಖೆ ನಡೆಸಲಾಗುತ್ತಿದೆ’ ಎಂದು ಡಿವೈಎಸ್‌ಪಿ ದತ್ತಾತ್ರೇಯ ಕರ್ನಾಡ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.