ಪ್ರಾತಿನಿಧಿಕ ಚಿತ್ರ
ರಾಯಚೂರು: ಜಿಲ್ಲೆಯಲ್ಲಿ ರಾಯಚೂರು ನಗರವೂ ಸೇರಿದಂತೆ ತಾಲ್ಲೂಕಿನ ಹಲವೆಡೆ ಶುಕ್ರವಾರ ಬೆಳಗಿನ ಜಾವದಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ದಟ್ಟ ಕಾರ್ಮೋಡ ಆವರಿಸಿದ್ದು, ಜನಜೀವನ ಸಂಪೂರ್ಣ ಸ್ತಬ್ದಗೊಂಡಿದೆ.
ನಗರ ಹಾಗೂ ಪಟ್ಟಣ ಪ್ರದೇಶದಲ್ಲಿ ರಸ್ತೆಗಳ ಮೇಲೆ ನೀರು ಉಕ್ಕಿ ಹರಿಯಿತು. ರಾಯಚೂರು–ಬಾಗಲಕೋಟೆ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಡಕಾಗಿದೆ. ಸಿರವಾರ ಪಟ್ಟಣದಲ್ಲಿ ಹೆದ್ದಾರಿ ಕೆಸರು ಗುಂಡಿಯಾಗಿದ್ದು, ವಾಹನ ಸವಾರರು ತೊಂದರೆ ಅನುಭವಿಸಿದರು.
ದಿನಪತ್ರಿಕೆ, ಹಾಲು ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಿಗೆ ಪೇಪರ್‌ಗಳು ಬಂದರೂ ಮನೆಗಳಿಗೆ ತಲುಪಿಲ್ಲ. ಸಗಟು ಮಾರುಕಟ್ಟೆಗೆ ಹೊರ ಜಿಲ್ಲೆಗಳಿಂದ ತರಕಾರಿ ಬಂದರೂ ಬೀದಿ ಬದಿ ಮಾರಾಟ ಮಾಡುವ ವ್ಯಾಪಾರಿಗಳಿಗೆ ತೊಡಕು ಉಂಟಾಗಿದೆ.
ದೇವದುರ್ಗ, ಮಾನ್ವಿ, ಮಸ್ಕಿ, ಸಿರವಾರ, ಕವಿತಾಳ, ಲಿಂಗಸುಗೂರು, ಹಟ್ಟಿ ಚಿನ್ನದಗಣಿ, ದೇವದುರ್ಗ, ಜಾಲಹಳ್ಳಿಯಲ್ಲೂ ಧಾರಾಕಾರ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.