ADVERTISEMENT

ಹೆಲ್ಮೆಟ್ ಧರಿಸಿ, ಸಂಚಾರ ನಿಯಮ ಪಾಲಿಸಿ: ಎಸ್‌ಪಿ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2019, 11:05 IST
Last Updated 16 ಅಕ್ಟೋಬರ್ 2019, 11:05 IST
ರಾಯಚೂರಿನಲ್ಲಿ ಮಂಗಳವಾರ ಆಯೋಜಿಸಿದ್ದ ಹೆಲ್ಮೆಟ್ ಜಾಗೃತಿ ಬೈಕ್‌ ‍ಸಂಚಾರಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ. ವೇದಮೂರ್ತಿ ಹಸಿರು ನಿಶಾನೆ ತೋರಿಸಿ, ಜಾಥಾದಲ್ಲಿ ಪಾಲ್ಗೊಂಡಿದ್ದರು
ರಾಯಚೂರಿನಲ್ಲಿ ಮಂಗಳವಾರ ಆಯೋಜಿಸಿದ್ದ ಹೆಲ್ಮೆಟ್ ಜಾಗೃತಿ ಬೈಕ್‌ ‍ಸಂಚಾರಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ. ವೇದಮೂರ್ತಿ ಹಸಿರು ನಿಶಾನೆ ತೋರಿಸಿ, ಜಾಥಾದಲ್ಲಿ ಪಾಲ್ಗೊಂಡಿದ್ದರು   

ರಾಯಚೂರು: ಪ್ರತಿಯೊಬ್ಬ ವಾಹನ ಸವಾರರು ಹೆಲ್ಮೆಟ್ ಧರಿಸಿಕೊಂಡು ಸಂಚಾರ ನಿಯಮಗಳನ್ನು ಪಾಲಿಸಿ ಅಪಾಯಗಳಿಂದ ರಕ್ಷಣೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಹೇಳಿದರು.

ನಗರದ ಮಹಾತ್ಮ ಗಾಂಧೀಜಿ ಜಿಲ್ಲಾ ಕ್ರೀಡಾಂಗಣದ ಹತ್ತಿರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಮಂಗಳವಾರ ಆಯೋಜಿಸಿದ್ದ ಹೆಲ್ಮೆಟ್‌ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವ ಪೂರ್ವ ಮಾತನಾಡಿದರು.

ವಾಹನಗಳಲ್ಲಿ ಸಂಚರಿಸಲು ಸಂಚಾರ ನಿಯಮಗಳನ್ನು ಪಾಲಿಸುವುದು ಅಗತ್ಯವಾಗಿದ್ದು, ಎಲ್ಲರೂ ಸಂಚಾರ ನಿಮಯಗಳನ್ನು ಅನುಸರಿಸಿ ಸುಗಮ ಸಂಚಾರ ಮಾಡಬೇಕು ಎಂದರು.

ADVERTISEMENT

ಕ್ರೀಡಾಂಗಣದಿಂದ ತೀನ್ ಕಂದಿಲ್ ಮೂಲಕ ಜಿಲ್ಲಾ ಪೊಲೀಸ್ ಪರೇಡ್ ಮೈದಾನದವರೆಗೆ ಪೊಲೀಸ್ ವರಿಷ್ಠಾಧಿಕಾರಿ ಸಹಿತ ನೂರಾರು ಜನರು ದ್ವಿಚಕ್ರ ವಾಹನಗಳಲ್ಲಿ ಜಾಥಾ ನಡೆಸಿ ಜಾಗೃತಿ ಮೂಡಿಸಿದರು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೂಡ ದ್ವಿಚಕ್ರ ವಾಹನದಲ್ಲಿ ಸಾಥ್‌ ನೀಡಿದರು

ಸಿಪಿಐ ಉಮೇಶ, ಪಿಎಸ್‌ಐಗಳಾದ ಅಮರಪ್ಪ ಶಿವಬಲ, ಉಮೇಶ ಕಾಂಬ್ಳೆ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.