ADVERTISEMENT

ನ.15ಕ್ಕೆ ಹೈಕೋರ್ಟ್‌ ನ್ಯಾಯಮೂರ್ತಿ ರಾಯಚೂರಿಗೆ: ಜಿಲ್ಲಾಧಿಕಾರಿ ಮಾಹಿತಿ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2025, 6:50 IST
Last Updated 13 ನವೆಂಬರ್ 2025, 6:50 IST
   

ರಾಯಚೂರು: ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ನ.15ರಂದು ರಾಯಚೂರಿಗೆ ಆಗಮಿಸಲಿದ್ದು, ಅಂದು ಜಿಲ್ಲೆಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ನೂತನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಅಧಿಕಾರಗಳ ಸಭೆ ನಡೆಸಿ ಅವರು ಮಾತನಾಡಿದರು.

ನ. 15ರಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ, ರಾಯಚೂರು ಜಿಲ್ಲೆಯ ದೇವದಾಸಿಯರ ಸ್ಥಿತಿ ಗತಿ ಹಾಗೂ ಪುನರ್ವಸತಿ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಂದು ತಿಳಿಸಿದರು.

ADVERTISEMENT

ಸಾರ್ವಜನಿಕರು, ಗಣ್ಯರು, ಅಧಿಕಾರಿಗಳು, ಪತ್ರಕರ್ತರಿಗೆ ಕುಡಿಯುವ ನೀರು ಹಾಗೂ ಊಟೋಪಚಾರದ ವ್ಯವಸ್ಥೆ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಬಕಾರಿ ಇಲಾಖೆ, ಆಹಾರ ಇಲಾಖೆ, ಮಹಾನಗರ ಪಾಲಿಕೆ, ವಾರ್ತಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು, ತುರ್ತು ಚಿಕಿತ್ಸೆಗಾಗಿ ವೈದ್ಯಾಧಿಕಾರಿ ಮತ್ತು ನುರಿತ ಸಿಬ್ಬಂದಿಗಳೊಂದಿಗೆ ಸೂಕ್ತ ಅಂಬುಲೆನ್ಸ್ ವ್ಯವಸ್ಥೆ ಮಾಡಬೇಕು. ದೇವದಾಸಿ ಮಹಿಳೆಯರಿಗೆ ಸೂಕ್ತ ಸಾರಿಗೆ ವ್ಯವಸ್ಥೆಗೆ ಕ್ರಮ ವಹಿಸಲು ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ, ಉಪ ವಿಭಾಗಾಧಿಕಾರಿ ಗಜಾನನ ಬಾಳೆ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತೆ ಸಂತೋಷ ರಾಣಿ, ವಿವಿಧ ಇಲಾಖೆಯ ಅಧಿಕಾರಿಗಳಾದ ನವೀನ್ ಕುಮಾರ, ಡಾ.ಸುರೇಂದ್ರ ಬಾಬು, ನಸೀರ್ ಅಹಮ್ಮದ್, ರಾಜೇಂದ್ರ ಜಲ್ದಾರ್, ಆಗ್ನಿ ಶಾಮಕದಳದ ರವೀಂದ್ರ ವಿವಿಧ ಅಭಿವೃದ್ಧಿ ನಿಗಮಗಳ ಜಿಲ್ಲಾ ವ್ಯವಸ್ಥಾಪಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.