ರಾಯಚೂರು: ಮಾನ್ವಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಮೂಲ ಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿ ವಸತಿ ನಿಲಯದ ವಿದ್ಯಾರ್ಥಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ವಸತಿ ನಿಲಯಕ್ಕೆ ತಿರುಗಾಡಲು ರಸ್ತೆ ನಿರ್ಮಿಸಿ ಕೊಡಬೇಕು. ಸಮರ್ಪಕ ವಿದ್ಯುತ್ ಸಂಪರ್ಕ ವಿಲ್ಲದೇ ಸಮಸ್ಯೆಯಾಗಿದೆ. ಜನರೇಟರ್ ಅಳವಡಿಸಬೇಕು. ವಸತಿ ನಿಲಯದ ಸುತ್ತಮುತ್ತ ಮುಳ್ಳು ಕಂಟಿಗಳು ಬೆಳೆದಿರುವ ಕಾರಣ ಹಾವು, ಚೇಳು, ವಿಷಜಂತುಗಳ ಹಾವಳಿ ಹೆಚ್ಚಾಗಿದ್ದು ಕೂಡಲೇ ಸುತ್ತಲೂ ಸ್ವಚ್ಛಗೊಳಿಸಬೇಕು ಎಂದರು.
ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸ್ಟಡಿಚೇರ್, ಡೈನಿಂಗ್ ಟೇಬಲ್, ಕಂಪ್ಯೂಟರ್ ವಿತರಣೆ ಮಾಡಬೇಕು. ಕ್ರೀಡಾ ಸಾಮಗ್ರಿಗಳನ್ನು ಒದಗಿಸಬೇಕು. ಶುದ್ಧ ಕುಡಿಯುವ ನೀರು ಕೇಳಿದರೆ ಗ್ರೇಡ್-1 ಅಧಿಕಾರಿ ಸ್ಪಂದಿಸುತ್ತಿಲ್ಲ. ಕೂಡಲೇ ಸಮರ್ಪಕವಾಗಿ ಸೌಕರ್ಯ ಕಲ್ಪಿಸಬೇಕು. ಇಲ್ಲದೇ ಹೋದಲ್ಲಿ ಹೋರಾಟ ಮುಂದುವರಿಸಲಾಗುವುದು ಎಂದು ವಿದ್ಯಾರ್ಥಿಗಳು ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.