ಶಕ್ತಿನಗರ: ಈದ್ ಉಲ್ ಫಿತ್ರ್ ಹಬ್ಬವನ್ನು ಶಾಂತಿ ಮತ್ತು ಸೌಹರ್ದದಿಂದ ಆಚರಣೆ ಮಾಡಬೇಕು. ಯಾವುದೇ ಅಹಿತಕರ ಘಟನೆಗಳು ಅಸ್ಪದ ನೀಡಬಾರದು ಎಂದುಪಿಎಸ್‌ಐ ಎಚ್.ಹುಲಿಗೇಶ್ ಓಂಕಾರ ಹೇಳಿದರು.
ಇಲ್ಲಿನ ಪೊಲೀಸ್ ಠಾಣೆಯಲ್ಲಿ ರಂಜಾನ್ ಅಂಗವಾಗಿ ಈಚೆಗೆ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.
ಮುಸ್ಲಿಂ ಮುಖಂಡ ಮಹೆಬೂಬ್ ಕೆರೂರ್ ಮಾತನಾಡಿ, ಎಲ್ಲಾ ಹಬ್ಬಗಳನ್ನು ಶಾಂತಿ ಮತ್ತು ಸೌಹರ್ದದಿಂದ ಆಚರಿಸಿಕೊಂಡು ಬಂದಿದ್ದೇವೆ. ಹಿಂದೂ– ಮುಸ್ಲಿಂ ಭೇದ ಭಾವ ಮಾಡದೆ, ಎಲ್ಲ ಹಬ್ಬ ಆಚರಣೆಗಳನ್ನು ಮಾಡುತ್ತೇವೆ ಎಂದರು.
ಮುಸ್ಲಿಂ ಹಾಗೂ ಹಿಂದೂ ಸಮಾಜದ ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.