
ಹುಮನಾಬಾದ್: ಗೋಡೆಯ ಮೇಲೆ ವಿಚಿತ್ರ ಆಕೃತಿಯೊಂದು ಕಂಡು ಬಂದಿದೆ ಎಂದು ಪಟ್ಟಣದ ಹೊರವಲಯದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ.
ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಗೋಡೆಯ ಮೇಲೆ ವಿಚಿತ್ರ ಆಕೃತಿಯೊಂದು ಕಾಣಿಸಿದ್ದನ್ನು ಗಮನಿಸಿದ ವಿದ್ಯಾರ್ಥಿಗಳು ಜೋರಾಗಿ ಚೀರುತ್ತ ವಸತಿ ನಿಲಯದಿಂದ ಹೊರಗೆ ಓಡಿ ಬಂದಿದ್ದಾರೆ. ಇದರಿಂದಾಗಿ ಸುತ್ತಮುತ್ತಲಿನ ಜನರು ಮತ್ತು ಪಾಲಕರ ಆತಂಕಕ್ಕೆ ಕಾರಣವಾಗಿದೆ.
ಶಾಸಕ ಭೇಟಿ: ಘಟನೆ ವಿಷಯ ತಿಳಿದು ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ ಮಂಗಳವಾರ ಬೆಳಿಗ್ಗೆ ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ಪರಿಶೀಲನೆ ನಡೆಸಿದರು. ವಸತಿ ನಿಲಯ ಕಟ್ಟಡ ಹಳೆಯದಾಗಿದೆ. ಹೀಗಾಗಿ ಹೊಸ ವಸತಿ ನಿಲಯ ಕಟ್ಟಡದ ಬಗ್ಗೆ ಪ್ರಸ್ತಾವ ನೀಡಿ ಅನುದಾನ ನೀಡಲಾಗುವುದು. ತಕ್ಷಣ ಈ ವಸತಿ ನಿಲಯವನ್ನು ಬೇರಡೆ ಸ್ಥಳಾಂತರಿಸಬೇಕು. ಕಡ್ಡಾಯವಾಗಿ ರಾತ್ರಿ ಸಮಯದಲ್ಲಿ ವಸತಿ ನಿಲಯದಲ್ಲಿ ಅಧಿಕಾರಿಗಳು ಇರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಘಟನೆಯ ವಿಷಯ ತಿಳಿದು ರಾತ್ರಿಯ ವಸತಿ ನಿಲಯಕ್ಕೆ ಭೇಟಿ ನೀಡಿ. ವಿದ್ಯಾರ್ಥಿಗಳಿಗೆ ಧೈರ್ಯ ತುಂಬಲಾಗಿದೆ. ಆತಂಕ ಪಡುವ ಅಗತ್ಯವಿಲ್ಲನಿಂಗರಾಜ್ ಅರಸ್, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.