ADVERTISEMENT

ಲಿಂಗಸುಗೂರು | 'ಜಿಲ್ಲಾಸ್ಪತ್ರೆ ಸ್ಥಳಾಂತರ ಕೈಬಿಡದಿದ್ದರೆ ಉಪವಾಸ ಸತ್ಯಾಗ್ರಹ'

​ಪ್ರಜಾವಾಣಿ ವಾರ್ತೆ
Published 27 ಮೇ 2025, 14:23 IST
Last Updated 27 ಮೇ 2025, 14:23 IST

ಲಿಂಗಸುಗೂರು: ಜಿಲ್ಲಾಸ್ಪತ್ರೆಯನ್ನು ಸಿಂಧನೂರಿಗೆ ಸ್ಥಳಾಂತರ ಮಾಡುವುದನ್ನು ಕೈಬಿಡದಿದ್ದರೆ ಶಾಸಕ, ವಿಧಾನ ಪರಿಷತ್ ಸದಸ್ಯ, ಮಾಜಿ ಶಾಸಕರ ನಿವಾಸದ ಎದುರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಕರುನಾಡು ವಿಜಯ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸಿ.ಚಂದ್ರಶೇಖರ ನಾಯಕ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ತಾಲ್ಲೂಕಿಗೆ ಮಂಜೂರಾಗಿದ್ದ 200 ಹಾಸಿಗೆ ಸಾಮರ್ಥ್ಯದ ಜಿಲ್ಲಾಸ್ಪತ್ರೆಯನ್ನು ಸಿಂಧನೂರಿಗೆ ಸ್ಥಳಾಂತರ ಮಾಡಿದ್ದನ್ನು ರದ್ದುಗೊಳಿಸಿ ಎಂಟು ದಿನಗಳೊಳಗೆ ಮರಳಿ ತಾಲ್ಲೂಕಿಗೆ ಮಂಜೂರು ಮಾಡಿಸದೇ ಇದ್ದಲ್ಲಿ ಶಾಸಕ ಮಾನಪ್ಪ ವಜ್ಜಲ್, ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ, ಮಾಜಿ ಶಾಸಕ ಡಿ.ಎಸ್.ಹೂಲಗೇರಿ ನಿವಾಸದ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು’ ಎಂದು ಹೇಳಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಹನುಮಂತ ಬಡಿಗೇರ, ರಂಗಪ್ಪ ಭೋವಿ, ಶಾಂತ ಹಣಗಿ, ಪರಶುರಾಮ ಗೊರೇಬಾಳ, ತಿರುಪತಿ ಭಜಂತ್ರಿ, ಜಾಫರ್ ನದಾಫ್, ದುರಗಪ್ಪ ಪೂಜಾರಿ, ಮಹಾಂತೇಶ ತುಪ್ಪದ, ಫಕೀರಪ್ಪ ಗುಡಿ, ಸಿದ್ದು ಮುದಗಲ್ ಹಾಗೂ ಹನುಮಂತ ನಾಗರಹಾಳ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.