ADVERTISEMENT

ಲಿಂಗಸುಗೂರು: ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ ಸಮಾರಂಭ

​ಪ್ರಜಾವಾಣಿ ವಾರ್ತೆ
Published 26 ಮೇ 2025, 13:24 IST
Last Updated 26 ಮೇ 2025, 13:24 IST
ಲಿಂಗಸುಗೂರು ಪುರಸಭೆ ವ್ಯಾಪ್ತಿಯ ಕರಡಕಲ್ ಗ್ರಾಮದಲ್ಲಿ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ ಸಮಾರಂಭದಲ್ಲಿ 14 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟವು
ಲಿಂಗಸುಗೂರು ಪುರಸಭೆ ವ್ಯಾಪ್ತಿಯ ಕರಡಕಲ್ ಗ್ರಾಮದಲ್ಲಿ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ ಸಮಾರಂಭದಲ್ಲಿ 14 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟವು   

ಲಿಂಗಸುಗೂರು: ‘ನವ ದಂಪತಿ ಆದರ್ಶ ಗುಣಗಳನ್ನು ಅಳವಡಿಸಿಕೊಂಡು ಪರಸ್ಪರ ಹೊಂದಾಣಿಕೆಯಿಂದ ಜೀವನ ನಡೆಸಬೇಕು. ಪ್ರತಿಯೊಬ್ಬರೂ ತಮ್ಮ ಮಕ್ಕಳನ್ನು ಸಂಸ್ಕಾರಯುತವಾಗಿ ಬೆಳೆಸಬೇಕು’ ಎಂದು ಹುನಕುಂಟಿ ಚಿದಾನಂದಯ್ಯ ಗುರುವಿನ ಹೇಳಿದರು.

ಪುರಸಭೆ ವ್ಯಾಪ್ತಿಯ ಕರಡಕಲ್ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಭಾರತೀಯ ಧರ್ಮ ಪರಂಪರೆಯಲ್ಲಿ ವಿವಾಹ ತನ್ನದೇಯಾದ ಮೌಲ್ಯ ಹೊಂದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಆಗುತ್ತಿರುವ ಬದಲಾವಣೆಯಿಂದ ವಿವಾಹ ಅದರ ಮೌಲ್ಯ ಕಳೆದುಕೊಳ್ಳುತ್ತಿದೆ. ಸಾಮೂಹಿಕ ವಿವಾಹದಲ್ಲಿ ಮದುವೆಯಾಗುವುದರಿಂದ ಆರ್ಥಿಕ ಹೊರೆ ತಡೆಯಬಹುದು. ಆರ್ಥಿಕವಾಗಿ ಸಂಕಷ್ಟ ಎದುರುಸುತ್ತಿರುವ ಕುಟುಂಬಗಳಿಗೆ ಸಾಮೂಹಿಕ ವಿವಾಹ ಸಹಕಾರಿ’ ಎಂದರು.

ADVERTISEMENT

ಸೋಮನಾಥ ಪೂಜಾರಿ, ಮಲ್ಲಿಕಾರ್ಜುನ ಮುತ್ಯಾ, ಶೇರಪ್ಪ ಮುತ್ಯಾ ಕಕ್ಕೇರಿ, ಬಾಲಯ್ಯ ಗುರುವಿನ, ಮುತ್ಯಾ, ಪುರಸಭೆ ಸದಸ್ಯ ರುದ್ರಪ್ಪ ಬ್ಯಾಗಿ, ಪತ್ರಕರ್ತ ಶಿವರಾಜ ಕೆಂಭಾವಿ, ಕರವೇ ಅಧ್ಯಕ್ಷ ಆಂಜನೇಯ ಭಂಡಾರಿ, ಸಿದ್ದಲಿಂಗಪ್ಪ ಕುಂಬಾರ, ಶರಣಪ್ಪ ಕರಡಕಲ್, ದೇವಪ್ಪ, ಹನುಮಂತ ಕಟಗಿ, ಮಂಜುನಾಥ ಗಲಗಿಲನ, ಹನುಮಂತ ಪೂಜಾರಿ, ವಿಜಯಕುಮಾರ ಪೂಜಾರಿ, ರಾಮಣ್ಣ, ನಿಂಗಪ್ಪ ಹಾಲಬಾವಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.