ನಿರುಪಾದಿ ಕೆ.ಗೋಮರ್ಸಿ
ಸಿಂಧನೂರು: ‘ನಾನು ಕೊಪ್ಪಳ ಲೋಕಸಭಾ ಕ್ಷೇತ್ರದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಟಿಕೆಟ್ ಆಕಾಂಕ್ಷಿ’ ಎಂದು ತಾಲ್ಲೂಕಿನ ಗೋಮರ್ಸಿ ಗ್ರಾಮದ ನಿರುಪಾದಿ ಕೆ.ಗೋಮರ್ಸಿ ತಿಳಿಸಿದ್ದಾರೆ.
ಈ ಬಗ್ಗೆ ಭಾನುವಾರ ಹೇಳಿಕೆ ನೀಡಿರುವ ಅವರು, ‘ಬೆಂಗಳೂರಿನಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಎರಡು ದಿನಗಳ ಕಾಲ ರಾಜ್ಯದ 28 ಲೋಕಸಭೆ ಕ್ಷೇತ್ರಗಳಿಗೆ ಸ್ಪರ್ಧಿಸಲು ಇಚ್ಛಿಸುವ ಅಭ್ಯರ್ಥಿಗಳ ಸಂದರ್ಶನ ನಡೆಯಿತು. ರಾಜ್ಯ ಸಮಿತಿ ಪದಾಧಿಕಾರಿಗಳು ನಡೆಸಿದ ಸಂದರ್ಶನದಲ್ಲಿ ತಾವು ಭಾಗವಹಿಸಿ ಸಮರ್ಪಕ ಉತ್ತರ ನೀಡಿದ್ದು, ತಮಗೆ ಟಿಕೆಟ್ ದೊರೆಯುವ ವಿಶ್ವಾಸವಿದೆ’ ಎಂದು ಹೇಳಿದ್ದಾರೆ.
‘ಕೊಪ್ಪಳ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ, ಭ್ರಷ್ಟಾಚಾರ, ಮದ್ಯಪಾನ ಮುಕ್ತ ಕ್ಷೇತ್ರದ ನಿರ್ಮಾಣ ನಮ್ಮ ಪಕ್ಷದ ಗುರಿಯಾಗಿದೆ. ಪಕ್ಷದ ತತ್ವ-ಸಿದ್ಧಾಂತ, ನೀತಿ ನಿಯಮಗಳಿಗೆ ಅನುಗುಣವಾಗಿ ಪ್ರಾಮಾಣಿಕ ಜನಪರ ರಾಜಕಾರಣಕ್ಕಾಗಿ ದುಡಿಯುವ ನಾಯಕರ ಹುಡುಕಾಟವನ್ನು ಪಕ್ಷ ನಡೆಸುತ್ತಿದೆ. ಇದರಲ್ಲಿ ನನಗೆ ಟಿಕೆಟ್ ಸಿಗುವುದು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.