ADVERTISEMENT

ಕನ್ನಡಿಗರು ಉಳಿದರೆ ಕನ್ನಡದ ಉಳಿವು: ಶಾಸಕ ವೆಂಕಟರಾವ

ತಾಲ್ಲೂಕಾಡಳಿತದಿಂದ 67ನೇ ಕನ್ನಡ ರಾಜ್ಯೋತ್ಸವ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2022, 8:18 IST
Last Updated 2 ನವೆಂಬರ್ 2022, 8:18 IST
ಸಿಂಧನೂರಿನ ಮಿನಿವಿಧಾನಸೌಧ ಆವರಣದಲ್ಲಿ ತಾಲ್ಲೂಕಾಡಳಿತ ವತಿಯಿಂದ ಮಂಗಳವಾರ ನಡೆದ 67ನೇ ಕನ್ನಡ ರಾಜ್ಯೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ಶಾಸಕ ವೆಂಕಟರಾವ್ ನಾಡಗೌಡ ಮಾತನಾಡಿದರು
ಸಿಂಧನೂರಿನ ಮಿನಿವಿಧಾನಸೌಧ ಆವರಣದಲ್ಲಿ ತಾಲ್ಲೂಕಾಡಳಿತ ವತಿಯಿಂದ ಮಂಗಳವಾರ ನಡೆದ 67ನೇ ಕನ್ನಡ ರಾಜ್ಯೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ಶಾಸಕ ವೆಂಕಟರಾವ್ ನಾಡಗೌಡ ಮಾತನಾಡಿದರು   

ಸಿಂಧನೂರು: ಕನ್ನಡಿಗರನ್ನು ಉಳಿಸಿದರೆ ಕನ್ನಡ ಉಳಿಯುತ್ತದೆ. ಕನ್ನಡವನ್ನು ಬದುಕಿನ ಭಾಷೆಯಾಗಿ ಮಾಡುವುದರ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿ, ಕಾರ್ಯರೂಪಕ್ಕೆ ತರಬೇಕು ಎಂದು ಶಾಸಕ ವೆಂಕಟರಾವ ನಾಡಗೌಡ ಅಭಿಪ್ರಾಯಪಟ್ಟರು.

ಇಲ್ಲಿನ ಮಿನಿವಿಧಾನಸೌಧದ ಆವರಣದಲ್ಲಿ ತಾಲ್ಲೂಕು ಆಡಳಿತದಿಂದ ಮಂಗಳವಾರ ನಡೆದ 67ನೇ ಕನ್ನಡ ರಾಜ್ಯೋತ್ಸವ ಆಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಅನ್ಯ ಭಾಷೆಯಗಳ ವ್ಯಾಮೋಹಕ್ಕೆ ಒಳಗಾಗಿರುವ ಕನ್ನಡಿಗರಿಂದಲೇ ಕನ್ನಡ ಭಾಷೆ ಮರೆಯಾಗುತ್ತಿರುವುದು ದುರಂತದ ಸಂಗತಿ ಎಂದರು.

ತಹಶೀಲ್ದಾರ್ ಅರುಣ್ ಎಚ್.ದೇಸಾ ಯಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಧ್ವರಾಜ ಆಚಾರ, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ ಮಾತನಾಡಿದರು.

ADVERTISEMENT

ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ 149 ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಲಾಯಿತು.

ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ, ಪೌರಾಯುಕ್ತ ಮಂಜುನಾಥ ಗುಂಡೂರು, ತಾ.ಪಂ. ಇಒ ಲಕ್ಷ್ಮಿದೇವಿ, ಬಿಇಒ ಶರಣಪ್ಪ ವಟಗಲ್ಲ, ಪಂಚಾಯತ್‍ರಾಜ್ ಎಂಜನಿಯರಿಂಗ್ ಉಪವಿಭಾಗದ ಎಇಇ ಅನ್ನಪೂರ್ಣ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವಿಜಯಾ ಎಸ್., ಲೋಕೋಪಯೋಗಿ ಇಲಾಖೆಯ ಎಇಇ ಸಿ.ಎಸ್.ಪಾಟೀಲ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿ ಲಿಂಗಪ್ಪ ಅಂಗಡಿ, ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ, ಕಸಾಪ ಅಧ್ಯಕ್ಷ ಪಂಪಯ್ಯಸ್ವಾಮಿ ಸಾಲಿಮಠ, ನಗರಸಭೆ ಸದಸ್ಯೆ ಕೆ.ಜಿಲಾನಿಪಾಷಾ, ಮುನೀರ್‌ ಪಾಷಾ, ಯಲ್ಲೂಸಾ ಇದ್ದರು.

ದುದ್ದುಪೂಡಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಗೂ ರೈತಗೀತೆ ಹಾಡಿದರು. ನಂತರ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ನೋಡುಗರ ಗಮನ ಸೆಳೆಯಿತು. ದೈಹಿಕ ಶಿಕ್ಷಕ ವಿಜಯರಂಗ ರೆಡ್ಡಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.