ADVERTISEMENT

‘ಮಹಿಳೆಯರು ಸಶಕ್ತರಾದರೆ ಸಂವಿಧಾನದ ಘನತೆ ವೃದ್ಧಿ’

ಸಂವಿಧಾನ ಸಮರ್ಪಣೆ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2025, 5:39 IST
Last Updated 27 ನವೆಂಬರ್ 2025, 5:39 IST
ರಾಯಚೂರಿನ ಡಾ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ನಗರ ಶಾಸಕ ಶಿವರಾಜ ಪಾಟೀಲ, ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಜಿಲ್ಲಾಧಿಕಾರಿ ನಿತೀಶ್‌, ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ ಪ್ರತಿಜ್ಞಾ ವಿಧಿ ಸ್ವೀಕರಿಸಿದರು
ರಾಯಚೂರಿನ ಡಾ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ನಗರ ಶಾಸಕ ಶಿವರಾಜ ಪಾಟೀಲ, ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಜಿಲ್ಲಾಧಿಕಾರಿ ನಿತೀಶ್‌, ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ ಪ್ರತಿಜ್ಞಾ ವಿಧಿ ಸ್ವೀಕರಿಸಿದರು   

ರಾಯಚೂರು: ‘ದೇಶದ ಮಹಿಳೆಯರು ಸುಶಿಕ್ಷಿತರಾಗಿ, ಆರ್ಥಿಕವಾಗಿ ಸಬಲರಾಗಿ ಉನ್ನತ ಸ್ಥಾನಕ್ಕೆ ತಲುಪಿದಾಗ ಸಂವಿಧಾನದ ಮೂಲ ಉದ್ದೇಶ ಈಡೇರಲಿದೆ. ಸಂವಿಧಾನದ ಘನತೆ ಇನ್ನಷ್ಟು ವೃದ್ಧಿಸಲಿದೆ’ ಎಂದು ಜಿಲ್ಲಾಧಿಕಾರಿ ನಿತೀಶ್‌ ಕೆ. ಹೇಳಿದರು.

ಇಲ್ಲಿಯ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

‘ಪ್ರಸ್ತುತವೂ ದೇಶದಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಕಾಣುತ್ತದೆ. ಸ್ವಾತಂತ್ರ್ಯ ಪೂರ್ವದಲ್ಲಿ ಈ ಅಸಮಾನತೆಗಳೂ ಇನ್ನೂ ಹೆಚ್ಚಾಗಿದ್ದವು. ಅವುಗಳನ್ನು ತೊಲಗಿಸಲು ದೇಶದ ಪ್ರತಿಯೊಬ್ಬರಿಗೂ ಸಂವಿಧಾನಬದ್ಧವಾಗಿ ಹಕ್ಕು ಕೊಡಲಾಗಿದೆ’ ಎಂದು ತಿಳಿಸಿದರು.

ADVERTISEMENT

ಜಾಥಾ: ಬೆಳಿಗ್ಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಜಿಲ್ಲಾ ರಂಗಮಂದಿರ ವರೆಗೆ ಸಂವಿಧಾನ ಜಾಗೃತಿ ಜಾಥಾ ನಡೆಯಿತು.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್, ರಾಯಚೂರು ನಗರ ಶಾಸಕ ಡಾ.ಎಸ್.ಶಿವರಾಜ ಪಾಟೀಲ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕಗಳ ಅಧ್ಯಕ್ಷ ಪವನಕಿಶೋರ ಪಾಟೀಲ, ಜಿಲ್ಲಾಧಿಕಾರಿ ನಿತೀಶ್ ಕೆ, ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕಾಂದೂ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಉಪ ವಿಭಾಗಾಧಿಕಾರಿ ಗಜಾನನ ಬಾಳೆ, ತಹಶೀಲ್ದಾರ್ ಸುರೇಶ ವರ್ಮಾ, ನಾಗೇಂದ್ರ ಮಠಮಾರಿ ವಿವಿಧ ಸಂಘಟನೆಗಳ ಪ್ರಮುಖರು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.

ಇದೇ ವೇಳೆ, ಸಂವಿಧಾನ ಪೀಠಿಕೆಯನ್ನು ಓದಿದರು. ಬಳಿಕ ಜಾಥಾವು, ಬಸವೇಶ್ವರ ವೃತ್ತ, ಚಂದ್ರಮೌಳೇಶ್ವರ ವೃತ್ತ, ತೀನ್ ಕಂದಿಲ್ ವೃತ್ತ, ತಹಶೀಲ್ದಾರ್ ಕಚೇರಿ, ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗ ಮಂದಿರಕ್ಕೆ ಬಂದು ಮುಕ್ತಾಯವಾಯಿತು..

ಹಟ್ಟಿ ಚಿನ್ನದ ಗಣಿ ಕಂಪನಿಯ ಉಪ ಪ್ರಧಾನ ವ್ಯವಸ್ಥಾಪಕ ಹಾಗೂ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಶ್ರೀಕೃಷ್ಣ ಶಾವಂತಗೇರಿ ಮಾತನಾಡಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಸುಭಾಷಚಂದ್ರ ವಿಶೇಷ ಉಪನ್ಯಾಸ ನೀಡಿದರು. ಹೋರಾಟಗಾರರಾದ ಜಾನ್‌ವೆಸ್ಲಿ ಕಾತರಕಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಪೋಷಾಕ ಧರಿಸಿ ಗಮನ ಸೆಳೆದರು.

ಕಲಾವಿದ ಪರಶುರಾಮ ಅರೋಲಿ ಅವರು ಅಂಬೇಡ್ಕರ್ ಗೀತೆಗಳ ಗಾಯನ ನಡೆಸಿಕೊಟ್ಟರು.

ಕೆ.ಇ.ಕುಮಾರ, ಎಂ.ಆರ್.ಭೇರಿ, ಅನಿತಾ ನವಲಕಲ್, ನಿವೇದಿತಾ ಎನ್, ವಿಶ್ವನಾಥ ಪಟ್ಟಿ, ಬಸವರಾಜ ಸಾಸಲಮರಿ, ಗಿರಿಯಪ್ಪ ನೆಲಹಾಳ, ಕರುಣಕುಮಾರ ಕಟ್ಟಿಮನಿ, ಪಿ.ಪ್ರಭಾಕರ, ಪ್ರಾಣೇಶ ಮಂಚಾಳ, ರವಿ ದಾದಸ, ಎಂ.ವೆಂಕಟೇಶ ಅರೋಲಿಕರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಸಿಂಧೂ ರಘು ಎಚ್.ಎಸ್., ಆದಿ ಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾಜೇಂದ್ರ ಜಲ್ದಾರ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಶಿವಮಾನಪ್ಪ ಉಪಸ್ಥಿತರಿದ್ದರು.

ಸಂವಿಧಾನ ಸಮರ್ಪಣೆ ದಿನಾಚರಣೆ ಪ್ರಯುಕ್ತ ರಾಯಚೂರಿನಲ್ಲಿ ವಿದ್ಯಾರ್ಥಿಗಳು ರಾಷ್ಟ್ರ ಧ್ವಜ ಹಿಡಿದು ಮೆರವಣಿಗೆಯಲ್ಲಿ ಸಾಗಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.