
ಪ್ರಜಾವಾಣಿ ವಾರ್ತೆ
ಸಿಂಧನೂರು: ತಾಲ್ಲೂಕಿನ ತುರ್ವಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಂಬರ್ ಪ್ಲೇಟ್ ಇಲ್ಲದೆ ಮರಳು ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಟಿಪ್ಪರ್ ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದು ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ನವಲಿ ಗ್ರಾಮದಿಂದ ಉಮಲೂಟಿ ಮೂಲಕ ಮರಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿರುವ ಖಚಿತ ಮಾಹಿತಿಯ ಮೇರೆಗೆ ತುರ್ವಿಹಾಳ ಪೊಲೀಸರು ದಾಳಿ ನಡೆಸಿದ್ದಾರೆ.
ಚಾಲಕರು ಲಾರಿಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಈ ಟಿಪ್ಪರ್ ಲಾರಿಗಳು ಸೋಮಲಿಂಗ, ರಜಾಕ್, ಅನಿಲಕುಮಾರ ಎನ್ನುವವರಿಗೆ ಸೇರಿವೆ ಎಂದು ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.