ದೇವದುರ್ಗ: ತಾಲ್ಲೂಕಿನ ಗಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಹಿರೇರಾಯಕುಂಪ್ಪಿ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು ₹6 ಲಕ್ಷ ಮೌಲ್ಯದ 1,083 ಮೆಟ್ರಿಕ್ ಟನ್ ಮರಳನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.
ತಹಶೀಲ್ದಾರ ಚನ್ನಮಲ್ಲಪ್ಪ ಘಂಟಿ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಮಹೇಶ ಮತ್ತು ಗಬ್ಬೂರು ಪಿಎಸ್ಐ ಗಂಗಪ್ಪ ಬುರ್ಲಿ ನೇತೃತ್ವದ ತಂಡ ಜಪ್ತಿ ಮಾಡಿ ಅಕ್ರಮ ಮರಳು ಸಂಗ್ರಹಿಸಿದ್ದ ಭೂ ಮಾಲೀಕ ಚಂದ್ರಾಮ ಅವರ ಮೇಲೆ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.