ADVERTISEMENT

ಸಿಂಧನೂರು: ಶಿಕ್ಷಕ ವೀರಣ್ಣ ಮಡಿವಾಳರ ಅಮಾನತು ಆದೇಶ ಹಿಂಪಡೆಯಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 1 ಜೂನ್ 2025, 13:28 IST
Last Updated 1 ಜೂನ್ 2025, 13:28 IST
ಮೌನೇಶ ಜಾಲವಾಡಗಿ
ಮೌನೇಶ ಜಾಲವಾಡಗಿ   

ಸಿಂಧನೂರು: ‘ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಆಗ್ರಹಿಸಿ ಮೌನ ಪ್ರತಿಭಟನೆ ನಡೆಸಿದ ಬೆಳ ಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ವೀರಣ್ಣ ಮಡಿವಾಳರ ಅವರ ಅಮಾನತು ಆದೇಶವನ್ನು ಕೂಡಲೇ ಹಿಂಪಡೆಯಬೇಕು’ ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ಜಿಲ್ಲಾ ಘಟಕದ ಸಂಚಾಲಕ ಮೌನೇಶ ಜಾಲವಾಡಗಿ ಒತ್ತಾಯಿಸಿದ್ದಾರೆ.

ಭಾನುವಾರ ಹೇಳಿಕೆ ನೀಡಿರುವ ಅವರು,‘ಅವರನ್ನು ಅಮಾನತು ಮಾಡಿರುವುದು ಸರ್ಕಾರ ಮತ್ತು ಶಿಕ್ಷಣ ಇಲಾಖೆಯ ವೈಫಲ್ಯ ಮುಚ್ಚಿಕೊಳ್ಳುವ ಹುನ್ನಾರವಾಗಿದೆ. ರಾಜ್ಯದಲ್ಲಿ ದಿನನಿತ್ಯ ನಡೆಯುತ್ತಿರುವ ಕೊಲೆ, ಸುಲಿಗೆ, ಅನ್ಯಾಯ, ಅತ್ಯಾಚಾರಗಳು ಮತ್ತು ವಿದ್ಯಾರ್ಥಿ-ಯುವ ಜನರ ಮೇಲಿನ ಹಲ್ಲೆ ಮತ್ತು ದೌರ್ಜನ್ಯಗಳನ್ನು ತಡೆಯುವ ನಿಟ್ಟಿನಲ್ಲಿ ದಿಟ್ಟ ಕ್ರಮ ಕೈಗೊಳ್ಳಬೇಕಾದ ಸರ್ಕಾರ ಕಣ್ಮುಚ್ಚಿ ಕುಳಿತಿದೆ’ ಎಂದು ಆಪಾದಿಸಿದ್ದಾರೆ.

‘ಈ ಕೂಡಲೇ ಮುಖ್ಯಶಿಕ್ಷಕರ ಅಮಾನತು ಆದೇಶ ಹಿಂಪಡೆಯಬೇಕು ಹಾಗೂ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳನ್ನು ಮಂಜೂರು ಮಾಡಬೇಕು. ನಿಷ್ಕಾಳಜಿ ತೋರಿದರೆ ರಾಜ್ಯದಾದ್ಯಂತ ಚಳವಳಿ ನಡೆಸುವುದು ಅನಿವಾರ್ಯವಾಗಲಿದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.