ADVERTISEMENT

‘371 (ಜೆ) ಅನುಷ್ಠಾನದಿಂದ ಅಭಿವೃದ್ಧಿ ಸಾಧ್ಯ’

ಸಿರವಾರ: ವಿವಿಧ ಕಚೇರಿಗಳಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 6:29 IST
Last Updated 18 ಸೆಪ್ಟೆಂಬರ್ 2020, 6:29 IST
ಸಿರವಾರದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉರ್ದು ಪ್ರೌಢಶಾಲೆ ಮುಖ್ಯ ಶಿಕ್ಷಕ ಶಿವುಕುಮಾರ ಧ್ವಜಾರೋಹಣ ನೆರವೇರಿಸಿದರು (ಎಡಚಿತ್ರ) ಸಿರವಾರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಧ್ವಜಾರೋಹಣ ನಡೆಯಿತು.
ಸಿರವಾರದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉರ್ದು ಪ್ರೌಢಶಾಲೆ ಮುಖ್ಯ ಶಿಕ್ಷಕ ಶಿವುಕುಮಾರ ಧ್ವಜಾರೋಹಣ ನೆರವೇರಿಸಿದರು (ಎಡಚಿತ್ರ) ಸಿರವಾರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಧ್ವಜಾರೋಹಣ ನಡೆಯಿತು.   

ಸಿರವಾರ: ‘ಹೆಸರಷ್ಟೇ ಬದಲಾವಣೆ ತಂದರೆ ಸಾಲದು, 371(ಜೆ) ಸಂಪೂರ್ಣ ಅನುಷ್ಠಾನಕ್ಕೆ ತರಬೇಕು. ಆಗ ಮಾತ್ರ ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಲು ಸಾಧ್ಯ' ಎಂದು ಸರ್ಕಾರಿ ಉರ್ದು ಪ್ರೌಢಶಾಲೆ ಮುಖ್ಯಶಿಕ್ಷಕ ಶಿವುಕುಮಾರ ಹೇಳಿದರು.

ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ‘ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಅಚಲ ನಿಲುವಿನಿಂದ 1948 ಸೆಪ್ಟಂಬರ್ 17ರಂದು ನಾವು ನಿಜಾಮ ಆಡಳಿತದಿಂದ ವಿಮುಕ್ತರಾದೆವು. ಅಖಂಡ ಕರ್ನಾಟಕದ ಭಾಗವಾದೆವು ಎಂದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ರಮಾದೇವಿ, ಸರ್ಕಾರಿ ಉರ್ದು ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಮಹ್ಮದ್ ಇಲಿಯಾಜ್, ಶಿಕ್ಷಕರಾದ ಮೈನುದ್ದೀನ್ ಕೊತ್ವಾಲ್, ಶ್ರೀನಿವಾಸ, ಅಮರೇಶ, ಪ್ರದೀಪ, ಉಮೇಶಪ್ಪ, ಎಸ್ಡಿಎಂಸಿ ಅಧ್ಯಕ್ಷ ಪಿ.ಕೃಷ್ಣ, ಸದಸ್ಯ ರಮೇಶ ಭೋವಿ ಇದ್ದರು.

ADVERTISEMENT

ತಹಶೀಲ್ ಕಚೇರಿ ನಡೆದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕೆ.ಶ್ರುತಿ, ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮುಖ್ಯಾಧಿಕಾರಿ ಕೆ.ಮುನಿಸ್ವಾಮಿ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರಿಮಳಾ ಮೈತ್ರಿ ಇದ್ದರು. ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಅಧ್ಯಕ್ಷ ದೇವರಾಜ ನಾಯಕ ಕುರಕುಂದಾ, ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಸುಜಾತ ನಾಯಕ, ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಮುಖ್ಯಶಿಕ್ಷಕ ಎಚ್.ಮಂಜುಳಾ,
ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಮುಖ್ಯಶಿಕ್ಷಕ ಡಿ.ಸುರೇಶ, ಬಸವೇಶ್ವರ ಕಾಲೇಜಿನಲ್ಲಿ ಕಾರ್ಯದರ್ಶಿ ವಿಜಯಕುಮಾರ ಗುಡ್ಡದಮನೆ, ಅಮರೇಗೌಡ ಪಾಟೀಲ ಬಯ್ಯಾಪೂರ ಕಾಲೇಜಿನಲ್ಲಿ ಪ್ರಾಚಾರ್ಯ ಅಮರೇಶಗೌಡ ನಂದರೆಡ್ಡಿ ಧ್ವಜಾರೋಹಣ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.