ADVERTISEMENT

ಫಲಾನುಭವಿಗಳ ಸಮ್ಮೇಳನ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2023, 7:32 IST
Last Updated 13 ಮಾರ್ಚ್ 2023, 7:32 IST
   

ರಾಯಚೂರು: ಇಲ್ಲಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿರುವ 'ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನ'ವನ್ನು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ನಾರಾಯಣಸ್ವಾಮಿ ಉದ್ಘಾಟಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್, ಸಂಸದ ರಾಜಾ ಅಮರೇಶ್ವರ ನಾಯಕ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ್ ನಾಯಕ, ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ್ ಕುರೇರ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದಾರೆ.

ಶಾಸಕ ಡಾ.ಶಿವರಾಜ ಪಾಟೀಲ ಅಧ್ಯಕ್ಷತೆ ವಹಿಸಿದ್ದಾರೆ. ಸಮ್ಮೇಳನದಲ್ಲಿ ಐದು ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ಪಾಲ್ಗೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.