ADVERTISEMENT

ಪೌರಕಾರ್ಮಿಕರ ಅನಿರ್ದಿಷ್ಟಾವಧಿ ಧರಣಿ ಆರಂಭ

​ಪ್ರಜಾವಾಣಿ ವಾರ್ತೆ
Published 30 ಮೇ 2025, 14:13 IST
Last Updated 30 ಮೇ 2025, 14:13 IST
ಸಿರವಾರದ ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಪೌರಕಾರ್ಮಿಕರು ಅನಿರ್ದಿಷ್ಟಾವಧಿ ಧರಣಿ ಕೈಗೊಂಡರು
ಸಿರವಾರದ ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಪೌರಕಾರ್ಮಿಕರು ಅನಿರ್ದಿಷ್ಟಾವಧಿ ಧರಣಿ ಕೈಗೊಂಡರು   

ಸಿರವಾರ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರು ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಶುಕ್ರವಾರ ಅನಿರ್ದಿಷ್ಟಾವಧಿ ಧರಣಿ ಕೈಗೊಂಡರು.

‘ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಪ್ರತಿಯೊಂದು ಸವಲತ್ತನ್ನೂ ಪೌರಸೇವಾ ನೌಕರರಿಗೆ ಪ್ರತ್ಯೇಕ ಆದೇಶವಿಲ್ಲದೆ ವಿಸ್ತರಿಸಬೇಕು. ರಾಜ್ಯದ ನಗರ–ಸ್ಥಳೀಯ ಸಂಸ್ಥೆಗಳಲ್ಲಿ ದಿನಗೂಲಿ ಕ್ಷೇಮಾಭಿವೃದ್ಧಿ ಅಧಿನಿಯಮಡಿ ಇರುವ ನೌಕರರನ್ನು ಸದರಿ ಅಧಿನಿಯಮದಿಂದ ಕೈಬಿಟ್ಟು ಸಕ್ರಮಗೊಳಿಸುವುದೂ ಸೇರಿದಂತೆ 6 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಆಗ್ರಹಿಸಿದರು.

ಪೌರ ಕಾರ್ಮಿಕರ ಸಂಘದ ರಾಜ್ಯ ಪರಿಷತ್ ಸದಸ್ಯ ತಿಮ್ಮಪ್ಪ ಜಗಲಿ, ತಾಲ್ಲೂಕು ಘಟಕದ ಗೌರವಾಧ್ಯಕ್ಷ ಸಚಿನ್ ಚ್ಯಾಗಿ, ಅಧ್ಯಕ್ಷ ಜಿ.ನರಸಿಂಹಲು, ಉಪಾಧ್ಯಕ್ಷ ಸಾದುರಂಗಯ್ಯ, ಕಾರ್ಯದರ್ಶಿ ಈರೇಶ, ಎಸ್.ಎಂ.ಹಸನ್, ಸುನೀತಾ ಸಜ್ಜನ್, ಸ್ವಾಮಿ ಸೇರಿ ಪೌರಕಾರ್ಮಿಕರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.