ADVERTISEMENT

ಸರಳವಾಗಿ ಸ್ವಾತಂತ್ರ್ಯ ದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2021, 2:21 IST
Last Updated 16 ಆಗಸ್ಟ್ 2021, 2:21 IST
ಜಾಲಹಳ್ಳಿ ಪ.ಪಂ ಯಲ್ಲಿ ಮುಖ್ಯಾಧಿಕಾರಿ ಧ್ವಜಾರೋಹಣ ನೆರವೇರಿಸಿದರು
ಜಾಲಹಳ್ಳಿ ಪ.ಪಂ ಯಲ್ಲಿ ಮುಖ್ಯಾಧಿಕಾರಿ ಧ್ವಜಾರೋಹಣ ನೆರವೇರಿಸಿದರು   

ಜಾಲಹಳ್ಳಿ: 75ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಭಾನುವಾರ ವಿವಿಧೆಡೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು.

ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮುಖ್ಯಾಧಿಕಾರಿ ಸಾಬಣ್ಣ ಕಟ್ಟಿಕಾರ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ,‘ಮಹಾತ್ಮರ ತ್ಯಾಗ, ಬಲಿದಾನದ ಬಳಿಕ ಸಿಕ್ಕ ಈ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಹೋಗುವ ಅವಶ್ಯಕತೆ ಇದೆ. ಈಗಿನ ಯುವಕರು ಇತಿಹಾಸವನ್ನು ಓದಿಕೊಳ್ಳಬೇಕು’ ಎಂದು ತಿಳಿಸಿದರು.

ಉಪ ತಹಶೀಲ್ದಾರ್ ಕಚೇರಿ, ಬ್ಯಾಂಕ್, ಸಹಕಾರ ಸಂಘ, ಶಾಲಾ–ಕಾಲೇಜು ಸೇರಿದಂತೆ ವಿವಿಧೆಡೆ ಧ್ವಜಾರೋಹಣ ಮಾಡಿದರು.

ADVERTISEMENT

ಪಟ್ಟಣ ಪಂಚಾಯಿತಿ ಸಿಬ್ಬಂದಿ ಯಂಕೋಬ ಪಲಕನಮರಡಿ ಹಾಗೂ ವಿಠೋಬ ಮಾಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.