ADVERTISEMENT

ಕ್ಯಾಂಟಿನ್‌ನಲ್ಲಿ ಅಂತರ ಕಾಯ್ದುಕೊಳ್ಳದ ಜನ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2020, 16:32 IST
Last Updated 3 ಏಪ್ರಿಲ್ 2020, 16:32 IST
ದೇವದುರ್ಗ ಪಟ್ಟಣದಲ್ಲಿ ಗುರುವಾರ ಉದ್ಘಾಟನೆಗೊಂಡಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಶುಕ್ರವಾರ ಊಟಕ್ಕೆ ಬಂದಿದ್ದ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದು ಕಂಡುಬಂದಿತು
ದೇವದುರ್ಗ ಪಟ್ಟಣದಲ್ಲಿ ಗುರುವಾರ ಉದ್ಘಾಟನೆಗೊಂಡಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಶುಕ್ರವಾರ ಊಟಕ್ಕೆ ಬಂದಿದ್ದ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದು ಕಂಡುಬಂದಿತು   

ದೇವದುರ್ಗ: ಪಟ್ಟಣದಲ್ಲಿ ಗುರುವಾರ ಉದ್ಘಾಟನೆಗೊಂಡ ಇಂದಿರಾ ಕ್ಯಾಂಟಿನ್ ಶುಕ್ರವಾರದಿಂದ ಕಾರ್ಯಾರಂಭ ಮಾಡಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕ್ಯಾಂಟೀನ್‌ಗೆ ಆಗಮಿಸಿದ್ದ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದು ಕಂಡುಬಂತು.

ಬಡವರಿಗೆ ಮತ್ತು ನಿರಾಶ್ರಿತರಿಗಾಗಿ ಸರ್ಕಾರ ಇಂದಿರಾ ಕ್ಯಾಂಟೀನ್ ಮೂಲಕ ಕಡಿಮೆ ದರದಲ್ಲಿ ಉಪಾಹಾರ ಮತ್ತು ಊಟದ ವ್ಯವಸ್ಥೆ ಮಾಡಲು ನಿರ್ದೇಶನ ನೀಡಿದೆ.

ಶಾಸಕ ಕೆ.ಶಿವನಗೌಡ ನಾಯಕ ಮತ್ತು ವಿಧಾನ ಪರಿಷತ್ ಸದಸ್ಯ ಬಸವರಾಜ ಪಾಟೀಲ ಇಟಗಿ ಅವರು ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟನೆ ಮಾಡಿದ್ದರು. ಗುರುವಾರ ಉಪಾಹಾರ ಮತ್ತು ಊಟವನ್ನು ಉಚಿತವಾಗಿ ಮಾಡಲಾಗಿತ್ತು.

ADVERTISEMENT

ಶುಕ್ರವಾರದಿಂದ ಶುಲ್ಕ ಪಾವತಿಸಿಕೊಂಡು ಉಪಾಹಾರ ಮತ್ತು ಊಟ ನೀಡಲಾಗುತ್ತಿದೆ. ಆದರೆ ಸಂಬಂಧಿಸಿದವರು ಕ್ಯಾಂಟೀನ್‌ಗೆ ಬರುವವರಿಗೆ ಕೊರೊನಾ ಮುಂಜಾಗ್ರತಾ ಕ್ರಮವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತಿಳಿ ಹೇಳದೆ ಇರುವುದರಿಂದ ಗುಂಪು, ಗುಂಪಾಗಿ ಬಂದು ಆಹಾರ ಸೇವನೆ ಮಾಡಿದರು.

ಕ್ಯಾಂಟೀನ್ ಪಕ್ಕದಲ್ಲಿಯೇ ತಹಶೀಲ್ದಾರ್‌ ಕಚೇರಿ ಮತ್ತು ಪುರಸಭೆ ಕಚೇರಿ ಇದೆ. ಶುಕ್ರವಾರ ಯಾವೊಬ್ಬ ಅಧಿಕಾರಿಯೂ ಕ್ಯಾಂಟೀನ್ ಹತ್ತಿರ ಸುಳಿಯದೆ ಇರುವುದು ಕಂಡು ಬಂದಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.