ಮಸ್ಕಿ: ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಮಾರಲದಿನ್ನಿ ಬಳಿಯ ಮಸ್ಕಿ ಜಲಾಶಯದ ಒಳ ಹರಿವು ಹೆಚ್ಚಿದೆ.
7.5 ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುವ 29 ಅಡಿ (0.5 ಟಿಎಂಸಿ ಅಡಿ) ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಮಂಗಳವಾರ 15 ಅಡಿ ನೀರು ಸಂಗ್ರಹವಾಗಿದೆ. ಜಲಾಶಯ ಭರ್ತಿಗೆ ಇನ್ನೂ 14 ಅಡಿ ನೀರು ಬರಬೇಕಾಗಿದೆ ಎಂದು ಯೋಜನೆಯ ಎಂಜಿನಿಯರ್ ದಾವುದ್ ‘ಪ್ರಜಾವಾಣಿ’ ಗೆ ತಿಳಿಸಿದ್ದಾರೆ.
ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದ್ದರಿಂದ ಯೋಜನೆಯ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಸಂತಸ ಮೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.