ADVERTISEMENT

ರಾಯಚೂರು: ಬೆಳೆನಷ್ಟ ಪರಿಹಾರ ನೀಡಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2021, 12:41 IST
Last Updated 20 ನವೆಂಬರ್ 2021, 12:41 IST

ರಾಯಚೂರು: ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ರೈತರ ಬೆಳೆ ನಷ್ಟವಾಗಿದ್ದು, ಕೂಡಲೇ ಸಮೀಕ್ಷೆ ನಡೆಸಿ ಬೆಳೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಶನಿವಾರ ಮನವಿ ಸಲ್ಲಿಸಿದರು.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಜಿಲ್ಲೆಯಲ್ಲಿ ಸತತ ನಾಲ್ಕು ದಿನಗಳ ಕಾಲ ಸುರಿದ ಮಳೆಯಿಂದಾಗಿ ಸಾವಿರಾರು ಎಕರೆ ಬೆಳೆ ನಾಶವಾಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಜಿಲ್ಲೆಯದಾದ್ಯಂತ ಭತ್ತ ಹಾಗೂ ಇತರೆ ಉತ್ಪನ್ನಗಳ ಮಾರಾಟಕ್ಕೆ ಬೆಂಬಲ ಬೆಲೆಯ ಖರೀದಿ ಕೇಂದ್ರ ತೆರೆಯಬೇಕು. ಶೀಘ್ರವೇ ಬೆಳೆ ಹಾನಿಯ ಕುರಿತು ಸಮೀಕ್ಷೆ ನಡೆಸಿ ನಷ್ಟ ಪರಿಹಾರ ನೀಡಬೇಕು ಎಂದರು.

ಜಿಲ್ಲಾಧ್ಯಕ್ಷ ಕೆ.ರಂಗನಾಥ ಪಾಟೀಲ, ಪ್ರಧಾನ ಕಾರ್ಯದರ್ಶಿ ಮಂಜುನಾತ ದಳವಾಯಿ, ವೆಂಕಟೇಶ ಬೂತಪಲ್ಲಿ, ಕೊಂಡ ರಾಜು, ಶಂಕರಪ್ಪಗೌಡ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.