ಮಾನ್ವಿ: ತಾಲ್ಲೂಕಿನ ಗೋರ್ಕಲ್ ಗ್ರಾಮ ಪಂಚಾಯಿತಿ ಕಚೇರಿಗೆ ಕೇಂದ್ರ ಸರ್ಕಾರದ ಜಲಶಕ್ತಿ ಸಚಿವಾಲಯದ ಅಧಿಕಾರಿಗಳ ತಂಡ ಗುರುವಾರ ಭೇಟಿ ನೀಡಿತು.
ನೋಡಲ್ ಅಧಿಕಾರಿ ಸತ್ಯಮೂರ್ತಿ ನೇತೃತ್ವದ ತಂಡದ ಸದಸ್ಯರು 2023-24 ಮತ್ತು 2024- 25ನೇ ಸಾಲಿನಲ್ಲಿ ‘ಜಲ ಸಿಂಚನ ಜಲ ಭಾಗಿದಾರ’ ಯೋಜನೆ ಅಡಿಯಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಅನುಷ್ಠಾನಗೊಂಡ ಹಳ್ಳ, ಕೆರೆ ಹಾಗೂ ನಾಲೆ ಹೂಳೆತ್ತುವ ಕಾಮಗಾರಿಗಳ ಕಡತಗಳನ್ನು ಪರಿಶೀಲಿಸಿದರು.
ನಂತರ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸದರಿ ಕಾಮಗಾರಿಗಳಿಂದ ರೈತರಿಗೆ ಆಗುವ ಅನುಕೂಲಗಳ ಬಗ್ಗೆ ಅವರು ಸ್ಥಳೀಯರಿಂದ ಮಾಹಿತಿ ಪಡೆದರು.
ಈ ವೇಳೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಖಾಲೀದ್ ಅಹ್ಮದ್, ಪಿಡಿಒ ಅಕ್ತರ್ ಪಾಷಾ, ತಾಂತ್ರಿಕ ಸಂಯೋಜಕ ವಿನೋದ್, ತಾಂತ್ರಿಕ ಸಹಾಯಕ ವೆಂಕಟೇಶ, ತಿಮ್ಮಪ್ಪ, ಗೋಪಾಲಕೃಷ್ಣ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.