ADVERTISEMENT

ರಾಯಚೂರು: ಮಾರ್ಚ್ 20ರಿಂದ‌ ಮೂರು ದಿನ ಅಂತರರಾಷ್ಟ್ರೀಯ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2025, 15:45 IST
Last Updated 4 ಫೆಬ್ರುವರಿ 2025, 15:45 IST
ರಾಯಚೂರಿನ ಪತ್ರಿಕಾ ಭವನದಲ್ಲಿ ಮಂಗಳವಾರ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಂ.ಹನುಮಂತಪ್ಪ ಅವರು ಭಾರತೀಯ ಗ್ರಂಥಾಲಯ ಸಂಘದಿಂದ ನಡೆಯುವ 70ನೇ ಅಂತರ ರಾಷ್ಟ್ರೀಯ ಸಮ್ಮೇಳನದ ಪೋಸ್ಟರ್‌ ಬಿಡುಗಡೆ ಮಾಡಿದರು
ರಾಯಚೂರಿನ ಪತ್ರಿಕಾ ಭವನದಲ್ಲಿ ಮಂಗಳವಾರ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಂ.ಹನುಮಂತಪ್ಪ ಅವರು ಭಾರತೀಯ ಗ್ರಂಥಾಲಯ ಸಂಘದಿಂದ ನಡೆಯುವ 70ನೇ ಅಂತರ ರಾಷ್ಟ್ರೀಯ ಸಮ್ಮೇಳನದ ಪೋಸ್ಟರ್‌ ಬಿಡುಗಡೆ ಮಾಡಿದರು   

ರಾಯಚೂರು: ‘ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಮಾರ್ಚ್ 20 ರಿಂದ 22ರವರೆಗೆ ಭಾರತೀಯ ಗ್ರಂಥಾಲಯ ಸಂಘದಿಂದ 70ನೇ ಅಂತರ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ ಎಂದು ಕುಲಪತಿ ಎಂ.ಹನುಮಂತಪ್ಪ ಹೇಳಿದರು.

ಸಮ್ಮೇಳನದಲ್ಲಿ ರಾಷ್ಟ್ರದ ವಿವಿಧೆಡೆಯಿಂದ 400 ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ರಾಯಚೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಗ್ರಂಥಾಲಯ ಮತ್ತು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಯದ ವತಿಯಿಂದ ನಡೆಯಲಿರುವ ಅಂತರ ರಾಷ್ಟ್ರೀಯ ಸಮ್ಮೇಳನದಿಂದ ಗ್ರಂಥಪಾಲಕರು ಮತ್ತು ಗ್ರಂಥಾಲಯ ವಿಜ್ಞಾನ ಶಿಕ್ಷಕರಿಗೆ ಅನೇಕ ಬಗೆಯಲ್ಲಿ ಲಾಭವಾಗಲಿದೆ ಎಂದು ಹೇಳಿದರು.

ADVERTISEMENT

ಸಮ್ಮೇಳನವು ಗ್ರಂಥಾಲಯಗಳು ಮತ್ತು ಕೃತಕ ಬುದ್ಧಿಮತ್ತೆಯ ವಿಷಯದ ಮೇಲೆ ಹೆಚ್ಚಿನ ಬೆಳಕು ಚೆಲ್ಲಲಿವೆ. ಸಮ್ಮೇಳನದಲ್ಲಿ ವಿವಿಧ ವಿಷಗಯಳ ಚರ್ಚೆ ನಡೆದ ನಂತರ ಪ್ರಮುಖ ಶಿಫಾರಸುಗಳನ್ನು ಭಾರತ ಸರ್ಕಾರಕ್ಕೆ ಮತ್ತು ಯುಜಿಸಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವ ಗುರುರಾಜ ಸುಂಕದ, ಸಮ್ಮೇಳನದ ಸಂಘಟನಾ ಕಾರ್ಯದರ್ಶಿ ಎಸ್ ಮಚೇಂದ್ರನಾಥ‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.