ADVERTISEMENT

ಸರ್ಕಾರದಿಂದ ಕಾರ್ಮಿಕರ ಶೋಷಣೆ: ಗಿರಿಯಪ್ಪ ಪೂಜಾರಿ

​ಪ್ರಜಾವಾಣಿ ವಾರ್ತೆ
Published 2 ಮೇ 2022, 2:41 IST
Last Updated 2 ಮೇ 2022, 2:41 IST
ದೇವದುರ್ಗದ ಎಪಿಎಂಸಿ ಕಾರ್ಮಿಕ ಕಚೇರಿಯಲ್ಲಿ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾರ್ಮಿಕರು
ದೇವದುರ್ಗದ ಎಪಿಎಂಸಿ ಕಾರ್ಮಿಕ ಕಚೇರಿಯಲ್ಲಿ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾರ್ಮಿಕರು   

ದೇವದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಹಾಗೂ ಬಂಡವಾಳ ಶಾಹಿಗಳ ಕೈಗೊಂಬೆಯಾಗಿ, ಕಾರ್ಮಿಕ ವರ್ಗವನ್ನು ಶೋಷಣೆಗೆ ಒಳಪಡಿಸಿದೆ ಎಂದು ಸಿಐಟಿಯು ತಾಲ್ಲೂಕು ಕಾರ್ಯದರ್ಶಿ ಗಿರಿಯಪ್ಪ ಪೂಜಾರಿ ಆರೋಪಿಸಿದರು.

ಪಟ್ಟಣದ ಎಪಿಎಂಸಿ ಆವರಣದ ಕಾರ್ಮಿಕ ಕಚೇರಿಯಲ್ಲಿ ಭಾನುವಾರ ನಡೆದ ಕಾರ್ಮಿಕ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿ, ದುಡಿಯುವ ವರ್ಗದ ಕತ್ತು ಇಸುಕಿದೆ. ಬಡ ಕಾರ್ಮಿಕರನ್ನು ಬೀದಿಗೆ ತಂದಿದೆ. ಮೂರು ಕೃಷಿ ಕಾಯ್ದೆಗಳ ಮೂಲಕ ರೈತರನ್ನು ಒಕ್ಕಲೆ ಬ್ಬಿಸುವ ಜತೆಗೆ ಬಡವರ ಬದುಕು ಕಿತ್ತುಕೊಳ್ಳಲು ಯತ್ನಿಸಿತು ಎಂದರು.

ADVERTISEMENT

ನಿರಂತರ ಬೆಲೆ ಏರಿಕೆಯಿಂದ ಬಡವರು ಬದುಕು ನಡೆಸುವುದು ಕಷ್ಟ ವಾಗಿದೆ. ಕೇಂದ್ರ ಸರ್ಕಾರ ಏನು ನಡೆ ದಿಲ್ಲ ಎನ್ನುವಂತೆ ವರ್ತಿಸುತ್ತಿದೆ ಎಂದರು.

ಸಿಐಟಿಯು ತಾಲ್ಲೂಕು ಅಧ್ಯಕ್ಷೆ ರಂಗಮ್ಮ ಅನ್ವರ್, ಮುಖಂಡರಾದ ರಮಾ ದೇವಿ, ಮರಿಯಮ್ಮ, ಯೂಸೂಫ್, ಮನೋಹರ್, ಶ್ರೀಲೇಖಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.