ADVERTISEMENT

International Yoga Day | ರಾಯಚೂರು ಜಿಲ್ಲೆಯಲ್ಲಿ ಯೋಗ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 21 ಜೂನ್ 2025, 5:06 IST
Last Updated 21 ಜೂನ್ 2025, 5:06 IST
<div class="paragraphs"><p>11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಶನಿವಾರ&nbsp;ರಾಯಚೂರು ನಗರದ ಮಹ್ಮಾತಗಾಂಧಿ ಕ್ರೀಡಾಂಗಣದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮ ನಡೆಯಿತು.</p></div>

11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಶನಿವಾರ ರಾಯಚೂರು ನಗರದ ಮಹ್ಮಾತಗಾಂಧಿ ಕ್ರೀಡಾಂಗಣದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮ ನಡೆಯಿತು.

   

ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆಯ ಆಶ್ರಯದಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಶನಿವಾರ ನಗರದ ಮಹ್ಮಾತಗಾಂಧಿ ಕ್ರೀಡಾಂಗಣದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಪಾಂಡ್ವೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಗರದ ಮಹ್ಮಾತಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ ಅಂಗವಾಗಿ ಯೋಗ ಶಿಕ್ಷಕರು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಸನಗಳ ಅಭ್ಯಾಸ ಮಾಡಿಸಿದರು.

ADVERTISEMENT

ಯೋಗ ಶಿಕ್ಷಕರು ವೃಕ್ಷಾಸನ, ಪಾದಹಸ್ತಾಸನ, ತಾಡಾಸನ, ತ್ರಿಕೋನಾಸನ, ಭದ್ರಾಸನ, ವಜ್ರಾಸನ, ಉಷ್ಟ್ರಾಸನ, ಅರ್ಧ ಉಷ್ಟ್ರಾಸನ, ಶಶಾಂಕಾಸನ, ಉತ್ತಾನ, ಮಂಡೂಕಾಸನ, ವಕ್ರಾಸನ, ಮಕರಾಸನ, ಭುಜಂಗಾಸನ, ಶಲಭಾಸನ, ಸೇತುಬಂಧಾಸನ, ಅರ್ಧ ಹಲಾಸನ, ಪವನಮುಕ್ತಾಸನ, ಶವಾಸನ ಹೇಳಿಕೊಟ್ಟರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗಣ್ಯರು, ವಿದ್ಯಾರ್ಥಿಗಳು, ಯೋಗ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಯೋಗ ಅಭ್ಯಾಸ ಮಾಡಿದರು. ನಂತರ ಯೋಗ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಶಂಕರಗೌಡ ಎಸ್.ಪಾಟೀಲ, ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ ನಾಯಕ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮುಖ್ಯಸ್ಥೇ ಸ್ಮಿತಾ ಅಕ್ಕೊರು, ಯೋಗ ಶಿಕ್ಷಕ ತಿಮ್ಮಪ್ಪ ವಡ್ಡಿಪಲ್ಲಿ, ಯೋಗ ನ್ಯಾಚೋರೋಪತಿ ವೈದ್ಯಾಧಿಕಾರಿ ಡಾ.ಪೂಜಾ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.