ADVERTISEMENT

ಇಸ್ಪೀಟ್ ಅಡ್ಡೆ ಮೇಲೆ ದಾಳಿ: 9 ಜನರ ವಿರುದ್ಧ ಪ್ರಕರಣ, 19 ಬೈಕ್ ವಶ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2024, 16:19 IST
Last Updated 9 ಆಗಸ್ಟ್ 2024, 16:19 IST

ಸಿಂಧನೂರು: ನಗರದ ವಳಬಳ್ಳಾರಿ ರಸ್ತೆಯ ಹೊರವಲಯದಲ್ಲಿರುವ ಇಸ್ಪೀಟ್ ಜೂಜಾಟ ಅಡ್ಡೆಯ ಮೇಲೆ ಡಿವೈಎಸ್‍ಪಿ ಬಿ.ಎಸ್.ತಳವಾರ ನೇತೃತ್ವದಲ್ಲಿ ಗುರುವಾರ ಸಂಜೆ ದಾಳಿ ನಡೆಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸ್ ಸಿಬ್ಬಂದಿ 9 ಜನರನ್ನು ಬಂಧಿಸಿ, ₹2,01,160 ನಗದು ಹಾಗೂ 19 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಸುರೇಶ ಇನಾಮದಾರ್ ಸೇರಿ ಇತರೆ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಶಹರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ಸುಧೀರ್ ಬೆಂಕಿ ಹಾಗೂ ಸಿಬ್ಬಂದಿ ದಾಳಿ ಕಾರ್ಯಾಚರಣೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT