ADVERTISEMENT

ಜಾಲಹಳ್ಳಿ: ಕಾಂಗ್ರೆಸ್‌ನಿಂದ ಕ್ಯಾಂಡಲ್‌ ಹಿಡಿದು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2025, 5:10 IST
Last Updated 10 ನವೆಂಬರ್ 2025, 5:10 IST
ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಭಾನುವಾರ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ವೋಟ್ ಚೋರ್ ಗದ್ದಿ ಚೋಡ್ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡಿದರು
ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಭಾನುವಾರ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ವೋಟ್ ಚೋರ್ ಗದ್ದಿ ಚೋಡ್ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡಿದರು   

ಜಾಲಹಳ್ಳಿ: ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಭಾನುವಾರ ಸಂಜೆ ‘ವೋಟ್ ಚೋರ್, ಗದ್ದಿ ಚೋಡ್’ ಎಂಬ ವಿನೂತನ ಕ್ಯಾಂಡಲ್ ಹಿಡಿದು ಪ್ರತಿಭಟನೆ ಮಾಡಿದರು. ರಂಗನಾಥ ದೇವಸ್ಥಾನದಿಂದ ಅಂಬೇಡ್ಕರ್ ವೃತ್ತವರೆಗೆ ಮೆರವಣಿಗೆ ನಡೆಸಿದರು.

ಕಾಂಗ್ರೆಸ್ ಮುಖಂಡ ರಾಜಾವಾಸುದೇವ ನಾಯಕ ಮಾತನಾಡಿ, ‘11 ವರ್ಷಗಳಿಂದ ಕೇಂದ್ರದಲ್ಲಿ ಅಡಳಿತ ನಡೆಸುತ್ತಿರುವ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಬಡವರ ಪರವಾಗಿಲ್ಲ. ಸುಳ್ಳು ಹೇಳುವುದರಲ್ಲಿ ಕಾಲ ಕಳೆಯುತ್ತಿದೆ. ಬಿಜೆಪಿಯ ಹಿಂದಿನ ಇತಿಹಾಸ ಕೂಡ ಪ್ರತಿಯೊಬ್ಬರೂ ಪರಿಶೀಲನೆ ಮಾಡಬೇಕು. ಹೀಗಾಗಿಯೇ ಕಾಂಗ್ರೆಸ್‌ ಪಕ್ಷದಿಂದ ರಾಷ್ಟ್ರ ಮಟ್ಟದ ವಿನೂತನ ಪ್ರತಿಭಟನೆ ಹಮ್ಮಿಕೊಂಡಿದೆ’ ಎಂದು ಹೇಳಿದರು.

ಜಿ.ಪಂ. ಮಾಜಿ ಸದಸ್ಯ ಬಸವರಾಜ ಪಂಪಾಪತಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಅಯ್ಯಪ್ಪ ಸ್ವಾಮಿ, ವೇಣುಗೋಪಾಲಗೌಡ, ಮುದ್ದರಂಗಪ್ಪ ತೊಗರಿ, ರಂಗನಾಥ ಕುದರಿ, ಹುಸೇನ್ ಸಾಬ್ ನಾಸಿ ಸೇರಿದಂತೆ ಅನೇಕರು ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.