ADVERTISEMENT

ಜನತಾಪುರ:ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಸ್ಕೂಲ್ ಕಿಟ್ ವಿತರಣೆ

​ಪ್ರಜಾವಾಣಿ ವಾರ್ತೆ
Published 31 ಮೇ 2025, 13:16 IST
Last Updated 31 ಮೇ 2025, 13:16 IST
ಮುದಗಲ್ ಸಮೀಪದ ಜನತಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ಕೂಲ್ ಕಿಟ್ ವಿತರಣೆ ಕಾರ್ಯಕ್ರಮವನ್ನು ಲಿಂಗಸುಗೂರು ಕ್ಷೇತ್ರ ಶಿಕ್ಷಣಾಧಿಕಾರಿ ಹುಂಬಣ್ಣ ರಾಠೋಡ ಉದ್ಘಾಟಿಸಿದರು
ಮುದಗಲ್ ಸಮೀಪದ ಜನತಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ಕೂಲ್ ಕಿಟ್ ವಿತರಣೆ ಕಾರ್ಯಕ್ರಮವನ್ನು ಲಿಂಗಸುಗೂರು ಕ್ಷೇತ್ರ ಶಿಕ್ಷಣಾಧಿಕಾರಿ ಹುಂಬಣ್ಣ ರಾಠೋಡ ಉದ್ಘಾಟಿಸಿದರು   

ಮುದಗಲ್: ಸಮೀಪದ ಜನತಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಬೆಂಗಳೂರಿನ ರೋಹನ್ ಕೇರ್ ಫೌಂಡೇಶನ್‌ನ ವ್ಯವಸ್ಥಾಪಕ ನಿರ್ದೇಶಕರಾದ ಮಂಜುನಾಥ ಹಾಗೂ ಮಹೇಶ ಅವರು ಸ್ಕೂಲ್ ಕಿಟ್ ವಿತರಣೆ ಮಾಡಿದರು.

ಲಿಂಗಸುಗೂರು ಕ್ಷೇತ್ರ ಶಿಕ್ಷಣಾಧಿಕಾರಿ ಹುಂಬಣ್ಣ ರಾಠೋಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,‘ಕಲ್ಯಾಣ ಕರ್ನಾಟಕ ಭಾಗದ ಜನತಾಪುರ ಶಾಲೆಯ 151 ವಿದ್ಯಾರ್ಥಿಗಳಿಗೆ          ಬೆಂಗಳೂರಿನ ರೋಹನ್ ಕೇರ್ ಫೌಂಡೇಶನ್ ಸ್ಕೂಲ್ ಬ್ಯಾಗ್, ಮೆಟಾಲಿಕ್ ವಾಟರ್ ಬಾಟಲ್, ಲೇಖನ ಸಾಮಗ್ರಿಗಳನ್ನು ಒಳಗೊಂಡ ₹1,000 ಮೌಲ್ಯದ ಸ್ಕೂಲ್ ಕಿಟ್‌ ನೀಡಿರುವುದು ಸಂತಸದ ವಿಷಯ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.   

ಶಿಕ್ಷಣ ಸಂಯೋಜಕ ಸಂತೋಷ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭುಲಿಂಗ ಗದ್ದಿ, ಎಸ್‌ಡಿಎಂಸಿ ಅಧ್ಯಕ್ಷ ಅಮರೇಗೌಡ ಪಾಟೀಲ, ಮುಖ್ಯಶಿಕ್ಷಕ ಗುರುಬಸಪ್ಪ, ಸಂಗಯ್ಯ ಹಿರೇಮಠ, ಶೋಭಾ ಹಟ್ಟಿ, ರವಿಕುಮಾರ ಹಾಗೂ ಜಗದೀಶ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.