ಮಾನ್ವಿ: ‘ಜೆಡಿಎಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶ್ರಮಿಸಬೇಕು’ ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.
ಪಟ್ಟಣದ ಜೆಡಿಎಸ್ ಪಕ್ಷದ ಕಾರ್ಯಾಲಯದಲ್ಲಿ ಈಚೆಗೆ ಪಕ್ಷದ ವಿವಿಧ ಘಟಕಗಳ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಿ ಅವರು ಮಾತನಾಡಿದರು.
ತಾಲ್ಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರನ್ನಾಗಿ ಎಂ.ಡಿ. ಬಾಷಾ ಸಾಬ್, ತಾಲ್ಲೂಕು ರೈತ ಘಟಕದ ಅಧ್ಯಕ್ಷರನ್ನಾಗಿ ಶರಣಪ್ವಪ ಗೌಡ ಮದ್ಲಾಪುರ, ನಗರ ಘಟಕದ ಅಧ್ಯಕ್ಷರನ್ನಾಗಿ ಎಚ್.ಮೌನೇಶ್ ಗೌಡ ಹಾಗೂ ನಗರ ಯುವ ಘಟಕದ ಅಧ್ಯಕ್ಷರನ್ನಾಗಿ ಎಂ.ಡಿ.ಉಸ್ಮಾನ್ , ತಾಲ್ಲೂಕು ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರನ್ನಾಗಿ ಲಕ್ಷ್ಮಣ ಯಾದವ, ತಾಲ್ಲೂಕು ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷರನ್ನಾಗಿ ವಿಜಯ್ ನಾಯಕ ಅವರನ್ನು ನೇಮಕ ಮಾಡಿ ಆದೇಶ ಪತ್ರ ವಿತರಿಸಲಾಯಿತು.
ನಂತರ ನೂತನ ಪದಾಧಿಕಾರಿಗಳನ್ನು ಪಕ್ಷದ ಮುಖಂಡರು ಸನ್ಮಾನಿಸಿದರು. ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಈರಣ್ಣ ಮರ್ಲಟ್ಟಿ ಪೋತ್ನಾಳ, ರಾಜ್ಯ ಯುವ ಘಟಕದ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ಮುಖಂಡರಾದ ಪಿ.ರವಿಕುಮಾರ, ಶೌಕತ್ ಅಲಿ, ಶರಣಪ್ಪ ಮೇದಾ, ಹೈದರ್ ನುಸ್ರತ್ , ಶಿವಕುಮಾರ ಚಲ್ಮಲ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.