ಉದ್ಯೋಗ
ಸಾಂದರ್ಭಿಕ ಚಿತ್ರ
ರಾಯಚೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆಯ ವತಿಯಿಂದ ನಗರದ ಏಕ್ ಮಿನಾರ್ ಮಸೀದಿ ಹತ್ತಿರ ಬೆರೂನ್ ಖಿಲ್ಲಾದಲ್ಲಿ ಆಗಸ್ಟ್ 23ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳ ಏರ್ಪಡಿಸಲಾಗಿದೆ.
ವಿವಿಧ ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ಉದ್ಯೋಗ ಮೇಳ ಏರ್ಪಡಿಸಲಾಗಿದೆ. ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರವಾಗಿ ಭರ್ತಿ ಮಾಡಿಕೊಳ್ಳಲಿದ್ದಾರೆ. ಆಸಕ್ತರು ಯುವಕ/ ಯುವತಿಯರು ಭಾಗಹಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
18ರಿಂದ 32 ವರ್ಷಗಳ ವರೆಗಿನ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಎಲ್ಲ ಪದವೀಧರ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ವೈಯಕ್ತಿಕ ವಿವರ ವಿದ್ಯಾರ್ಹತೆಯ ಅಂಕ ಪಟ್ಟಿಗಳ ನಕಲು ಪ್ರತಿಗಳು, ಆಧಾರ್ ಕಾರ್ಡ್ ಹಾಗೂ ಭಾವಚಿತ್ರಗಳೊಂದಿಗೆ ಹಾಜರಾಗಬೇಕು. ವಿವರಗಳಿಗೆ 08532-231684, 8095125775, 9008211750, 7795195171 ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.