
ಸಾಂದರ್ಭಿಕ ಚಿತ್ರ
ಸಿರವಾರ: ಸಿರವಾರ, ಮಾನ್ವಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿ ಪ್ರಕಟಣೆ ಹೊರಡಿಸಲಾಗಿದೆ.
ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 2026ರ ಜನವರಿ 15ರವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ಅವಕಾಶ ನೀಡಲಾಗಿದೆ. ವೆಬ್‌ಸೈಟ್ ವಿಳಾಸ: https://karnemakaone.kar.nic.in/abcd/ ನಲ್ಲಿ ಪೂರ್ಣಗೊಳಿಸಬೇಕು. ಆನ್‌ಲೈನ್‌ನಲ್ಲಿ ಅಪೂರ್ಣ ಅರ್ಜಿಗಳನ್ನು ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಾರ್ಯಾಲಯ ಸಿರವಾರ, ಮಾನವಿ ಇವರನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕ ಮಾಡಬಹುದಾಗಿದೆ ಎಂದು ಸಿರವಾರ, ಮಾನವಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.