ADVERTISEMENT

ಹಿರಿಯ ಪತ್ರಕರ್ತ ಶರಣು ಪಾ ಹಿರೇಮಠ ನಿಧನ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2025, 14:06 IST
Last Updated 25 ಮಾರ್ಚ್ 2025, 14:06 IST
ಶರಣು ಪಾ ಹಿರೇಮಠ
ಶರಣು ಪಾ ಹಿರೇಮಠ   

ಸಿಂಧನೂರು: ಹಿರಿಯ ಪತ್ರಕರ್ತ ಶರಣು ಪಾ ಹಿರೇಮಠ (63) ಮಂಗಳವಾರ ಮಧ್ಯಾಹ್ನ ನಿಧನರಾದರು.‌

ಮೃತರಿಗೆ ಪತ್ನಿ, ಮೂವರು ಪುತ್ರರು,  ಪುತ್ರಿ ಇದ್ದಾರೆ. ಬುಧವಾರ ಮಧ್ಯಾಹ್ನ 2 ಗಂಟೆಗೆ ತಾಲ್ಲೂಕಿನ ತುರ್ವಿಹಾಳ ಪಟ್ಟಣದಲ್ಲಿ ಮೃತರ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಶರಣು ಅವರು 30 ವರ್ಷಗಳಿಂದ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಬೆಂಗಳೂರಿನ ಆಸ್ಪತ್ರೆವೊಂದರಲ್ಲಿ ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದ ಅವರು ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗಿ ಮಂಗಳವಾರ ಮೃತಪಟ್ಟಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.