
ಪ್ರಜಾವಾಣಿ ವಾರ್ತೆ
ರಾಯಚೂರು: ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಕಲ್ಯಾಣ ಕರ್ನಾಟಕ ಉತ್ಸವವನ್ನು ಸರಳವಾಗಿ ಆಚರಿಸಲಾಯಿತು.
ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ನಗರ ಶಾಸಕ ಡಾ.ಶಿವರಾಜ ಪಾಟೀಲ ಸೇರಿದಂತೆ ಜಿಲ್ಲೆಯ ಶಾಸಕರು ಕಾರ್ಯಕ್ರಮಕ್ಕೆ ಗೈರುಹಾಜರಿಯಾಗಿದ್ದರು.
ರಾಷ್ಟ್ರಧ್ವಜಾರೋಹಣ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ‘ರಾಯಚೂರು ವಿಮಾನನಿಲ್ದಾಣ ನನಸಾಗುವ ಹಂತದಲ್ಲಿದ್ದು, ಮೀಸಲು ಭೂಮಿಯ ಸರ್ವೇ ಕಾರ್ಯ ನಡೆಯುತ್ತಿದೆ’ ಎಂದರು.
ಪೊಲೀಸರು ಕವಾಯತು ಪ್ರದರ್ಶನ ಮಾಡಿದ ಬಳಿಕ ಕಾರ್ಯಕ್ರಮ ಮುಕ್ತಾಯವಾಯಿತು. ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಈ ವರ್ಷ ಇರಲಿಲ್ಲ. ಕೋವಿಡ್ ಕಾರಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸಿರಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.