ರಾಯಚೂರು: ಜಿಲ್ಲಾಡಳಿತದ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪ್ರಯುಕ್ತ ನಗರದ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ ಧ್ವಜಾರೋಹಣ ನೆರವೇರಿಸಿದರು.
ಶಾಸಕ ಶಿವರಾಜ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯ ವಸಂತಕುಮಾರ, ರುಡಾ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಜಿಲ್ಲಾಧಿಕಾರಿ ನಿತಿಶ್ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ, ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಪ್ಪ ಭಜಂತ್ರಿ, ಮಹಾನಗರಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ, ರಾಯಚೂರು ಉಪ ವಿಭಾಗಾಧಿಕಾರಿ ಜಗನ್ನಾಥ ಬಾಳೆ , ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ, ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.